ವಿಟ್ಲದ ಮೇಗಿನಪೇಟೆ ಹೊರೈಝನ್ ಪಬ್ಲಿಕ್ ಸ್ಕೂಲ್ನಲ್ಲಿ ನೂತನವಾಗಿ ಪ್ರಾರಂಭಿಸಲಾದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಮಂಗಳವಾರ ಚಾಲನೆ ನೀಡಲಾಯಿತು.
ವಿಟ್ಲ ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿಯ ಹಿರಿಯ ಸದಸ್ಯ ಇಬ್ರಾಹಿಂ ಹಾಜಿ ಪೊನ್ನೋಟ್ಟು ಅವರು ಚಾಲನೆ ನೀಡಿದರು. ಮದ್ರಸ ಶಿಕ್ಷಕ ಉಮ್ಮರ್ ಸಅದಿ ದುವಾಃ ಆಶೀರ್ವಚನ ನೀಡಿದರು.
ಈ ಸಂದರ್ಭ ಶಾಲಾ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಸಂಚಾಲಕ ಅಬೂಬಕ್ಕರ್ ನೋಟರಿ ವಿಟ್ಲ, ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್ಯದರ್ಶಿ ಹನೀಫ್ ಎಂಎ, ಖಜಾಂಜಿ ವಿ.ಎಚ್ ಅಶ್ರಫ್, ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಶಾಲಾ ಮೇಲ್ವಿಚಾರಕ ವಿಕೆಎಂ ಅಶ್ರಫ್, ಜಮಾಅತ್ ಕಮಿಟಿ ಸದಸ್ಯರಾದ ಅಂದುಂಞ ಗಮಿ, ಇಬ್ರಾಹಿಂ ಏರ್ಸೌಂಡ್ಸ್, ಅಬೂಬಕ್ಕರ್ ಅನಿಲಕಟ್ಟೆ, ಶಾಲಾ ಮುಖ್ಯೋಪಾಧ್ಯಾಯಿನಿ ಸೆಕಿನಾ ಮೊದಲಾದವರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…