ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿ 2018-19 ನೇ ಸಾಲಿನಲ್ಲಿ ಒಟ್ಟು 40 ಶಾಲೆಗಳಲ್ಲಿ ತುಳು ಪಠ್ಯ ಅನುಷ್ಠನಗೊಂಡಿದ್ದು ಒಟ್ಟು 2012 ವಿದ್ಯಾರ್ಥಿಗಳು ತುಳು ಭಾಷೆಯನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ನಡೆಸುವ ತುಳು ಭಾಷಾ ಶಿಕ್ಷಕರಿಗೆ ತರಬೇತಿ ಕಾರ್‍ಯಾಗಾರವನ್ನು ಜುಲೈ 19ರಂದು ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ನಡೆಸಲಾಗುವುದು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನಡೆಯುವ ಈ ಕಾರ್‍ಯಾಗಾರವನ್ನು ಬೆಳಿಗ್ಗೆ 10 ಗಂಟೆಗೆ ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿ ಅಧ್ಯಕ್ಷತೆಯಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ ಎನ್. ಉದ್ಘಾಟಿಸಲಿದ್ದಾರೆ. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ರಾಜೇಶ್ ಜಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳು ಕಾರ್‍ಯಾಗ್ರಹವನ್ನು ನಡೆಸಿ ಕೊಡಲಿದ್ದಾರೆ. ಎಲ್ಲಾ 40 ಶಾಲೆಗಳ ತುಳು ಭಾಷಾ ಶಿಕ್ಷಕರನ್ನು ಕಾರ್‍ಯಾಗಾರಕ್ಕೆ ಆಹ್ವಾನಿಸಲಾಗಿದೆ ಎಂದು ಅಕಾಡಮಿ ಸದಸ್ಯ ಎ.ಗೋಪಾಲ ಅಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.