ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮ ಸಭೆಯು ಮಲೆಯಾಳಿ ಬಿಲ್ಲವ ಸೇವಾ ಸಂಘ(ರಿ) ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು.
ಸರಕಾರ ವಿವಿಧ ಇಲಾಖೆಗಳಾದ ಕಂದಾಯ,ಆರೋಗ್ಯ, ಕೃಷಿ, ಮೆಸ್ಕಾಂ, ತೋಟಗಾರಿಕೆ, ಶಿಕ್ಷಣ, ಪಶುಸಂಗೋಪನಾ ಇಲಾಖೆ, ಪಂಚಾಯತ್‌ರಾಜ್‌ಇಂಜಿನಿಯರಿಂಗ್, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಇಲಾಖಾವಾರು ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡಿದರು.
ಗ್ರಾಮದ ಅಭಿವೃದ್ದಿ ಬಗ್ಗೆ ಗ್ರಾಮಸ್ಥರು ಸಲಹೆ ಸೂಚನೆ ನೀಡಿದರು. ಕಂದಾಯ ಇಲಾಖೆಯ ಕಳೆದ ನಲ್ವತ್ತು ವರ್ಷಗಳಿಂದ ಸುದೀರ್ಘ ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ಕರ್ತವ್ಯ ಸಲ್ಲಿಸಿ ಇರಾಗ್ರಾಮದಲ್ಲಿ ಕಳೆದ ಮೂರು ವರ್ಷ ಕರ್ತವ್ಯ ನಿರ್ವಹಿಸಿ ಜುಲೈ ತಿಂಗಳಲ್ಲಿ ಕರ್ತವ್ಯ ನಿವೃತ್ತಿ ಹೊಂದಲಿರುವ ಗ್ರಾಮಕರಣಿಕ ಎ.ಪಿ.ಭಟ್ ಅವರನ್ನು ಸನ್ಮಾನಿಸಲಾಯಿತು.
ಕುರ್ನಾಡುಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್ ಗಟ್ಟಿ, ನೋಡಲ್ ಅಧಿಕಾರಿ ಬಂಟ್ವಾಳ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೊಣಯ್ಯ ನಾಯಕ್ , ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಚಂದ್ರಾವತಿ ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್ ಅಭಿವೃಧ್ದಿಅಧಿಕಾರಿ ನಳಿನಿ ಎ.ಕೆ ಸ್ವಾಗತಿಸಿ, ಸಿಬ್ಬಂದಿ ಗುಲಾಬಿ ವಂದಿಸಿದರು.
Be the first to comment on "ಇರಾ: ಪ್ರಥಮ ಹಂತದ ಗ್ರಾಮಸಭೆ"