ರೋಟರಿ ಕ್ಲಬ್ ಬಂಟ್ವಾಳ ಟೌನ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು. 15ರಂದು ಸಂಜೆ 7 ಗಂಟೆಗೆ ಬಿ.ಸಿ.ರೋಡ್‌ನಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಹೇಳಿದ್ದಾರೆ.
ಜಾಹೀರಾತು
ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಟರಿ ಜಿಲ್ಲೆ-2181ರ ಜಿಲ್ಲಾ ಸಹ ತರಬೇತುದಾರ ಬಿ.ಶೇಖರ್ ಶೆಟ್ಟಿ ಪದಗ್ರಹಣ ಸಮಾರಂಭ ನೇತೃತ್ವ ವಹಿಸುವರು. ವಲಯ-೪ರ ಅಸಿಸ್ಟೆಂಟ್ ಗವರ್ನರ್ ಎನ್. ಪ್ರಕಾಶ್ ಕಾರಂತ್, ಜೋನಲ್ ಲೆಫ್ಟಿನೆಂಟ್ ಸಂಜೀವ ಪೂಜಾರಿ, ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು. ಈ ವರ್ಷದ ರೋಟರಿ ೩೧೮೧ರ ಜಿಲ್ಲಾ ಗವರ್ನರ್ ರೋಹಿನಾಥ್ ಅವರ ಜಿಲ್ಲೆಯ ವಿಶೇಷ ಯೋಜನೆಯಾದ ಆಶಾ ಸ್ಫೂರ್ತಿ ಯೋಜನೆಯಡಿ ಜಿಲ್ಲೆಯ ಅಂಗನವಾಡಿಗಳ ಪುನಶ್ಚೇತನ ಹಾಗೂ ನೆರವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ನಿಯೋಜಿತ ಅಧ್ಯಕ್ಷ ಉಮೇಶ್ ನಿರ್ಮಲ್, ನಿಯೋಜಿತ ಕಾರ್ಯದರ್ಶಿ ಜಯರಾಜ್ ಬಂಗೇರ, ವಲಯ-೪ರ ಅಸಿಸ್ಟೆಂಟ್ ಗವರ್ನರ್ ಎನ್. ಪ್ರಕಾಶ್ ಕಾರಂತ್ ಮತ್ತು ಆಶಾ ಮಣಿ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "15ರಂದು ರೋಟರಿ ಟೌನ್ ಬಂಟ್ವಾಳ ಕ್ಲಬ್ ಪದಗ್ರಹಣ"
Be the first to comment on "15ರಂದು ರೋಟರಿ ಟೌನ್ ಬಂಟ್ವಾಳ ಕ್ಲಬ್ ಪದಗ್ರಹಣ"