ಬಂಟ್ವಾಳ

15ರಂದು ನಮೋ ಜಾಗೃತಿ ಜಾಥಾ


ಬಿಜೆಪಿ ರಾಜ್ಯ ಯುವ ಮೋರ್ಚಾ ಕರೆಯಂತೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ 15ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ (ನಮೋ) ಯೋಜನೆಗಳ ಬಗ್ಗೆ ಜಾಗೃತಿ ಜಾಥಾ ಬಂಟ್ವಾಳ ತಾಲೂಕಿಗೆ ಬೆಳಗ್ಗೆ 10.30 ಕ್ಕೆ ಪ್ರವೇಶಿಸಲಿದೆ.

ಪುತ್ತೂರಿನಲ್ಲಿ ಜಾಥಾವನ್ನು ಪುತ್ತೂರಿನ ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ಯುವಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ಮತ್ತು ಶಾಸಕ ಸಂಜೀವ ಮಠಂದೂರು ಉದ್ಘಾಟಿಸುವರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಾಸಕ ಹರೀಶ್ ಪೂಂಜ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ವಿಜಯೇಂದ್ರ ಮತ್ತು ರಾಜ್ಯದ ಪ್ರಮುಖರು ಭಾಗವಹಿಸಲಿದ್ದಾರೆ.

ಜಾಹೀರಾತು

ಮಾಣಿಯಲ್ಲಿ ಬಂಟ್ವಾಳ ಕ್ಷೇತ್ರ ಯುವ ಮೋರ್ಚಾ ನೇತೃತ್ವದಲ್ಲಿ ಜಾಥಾವನ್ನು ಸ್ವಾಗತಿಸಲಾಗುವುದು. ಶಾಸಕ ಶಾಸಕರಾದ ರಾಜೇಶ್ ನಾಯ್ಕ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿಯ ವಕ್ತಾರರಾದ ಹರಿಕೃಷ್ಣ ಬಂಟ್ವಾಳ, ಕ್ಷೇತ್ರದ ಅಧ್ಯಕ್ಷರಾದ ಬಿ.ದೇವದಾಸ್ ಶೆಟ್ಟಿ ಸಹಿತ ಪ್ರಮುಖರು ಭಾಗವಹಿಸಲಿದ್ದಾರೆ.

ಈ ಜಾಥದಲ್ಲಿ ಬಂಟ್ವಾಳ ಕ್ಷೇತ್ರದಿಂದ ಸುಮಾರು 300 ವಾಹನಗಳು ಭಾಗವಹಿಸಲಿದ್ದು ಬಂಟ್ವಾಳ ಕ್ಷೇತ್ರದ ತುಂಬೆಯವರೆಗೆ ಸಾಗಿ ಬೀಳ್ಕೊಡಲಾಗುವುದು ನಂತರ ಜಾಥವು ಮಂಗಳೂರು ಮೂಲಕ ಸುರತ್ಕಲ್‌ಗೆ ಸಾಗಿ ಅಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಶ್ರೀನಿವಾಸ್ ಪೂಜಾರಿ, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಸುನೀಲ್ ಕುಮಾರ್, ಸ್ಥಳೀಯ ಶಾಸಕರಾದ ಭರತ್ ಶೆಟ್ಟಿ, ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ ಕಾಮತ್ ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಯುವಮೋರ್ಚಾ ಅಧ್ಯಕ್ಷರಾದ ವಜ್ರನಾಥ ಕಲ್ಲಡ್ಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts