ಬಂಟ್ವಾಳ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಶುಕ್ರವಾರ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತಿಯಲ್ಲಿ 2018-2021ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ ಉಪಸ್ಥಿತರಿದ್ದರು. ನಿರ್ಗಮನ ಅಧ್ಯಕ್ಷ ಮೌನೇಶ ವಿಶ್ವಕರ್ಮ ಮಾತನಾಡಿ, ಎಲ್ಲಾ ಸದಸ್ಯರ ಸಹಕಾರದಿಂದಾಗಿ ಕಳೆದ ವರ್ಷ ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ರಜತ ವರ್ಷಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೊಸ ತಂಡಕ್ಕೆ ಎಲ್ಲರೂ ಸಹಕಾರ ನೀಡುವ ಮೂಲಕ ಹೊಂದಾಣಿಕೆಯೊಂದಿಗೆ ಸಂಘವನ್ನು ಮುನ್ನಡೆಸಬೇಕಾಗಿದೆ ಎಂದರು.

ಜಾಹೀರಾತು

ಅಧ್ಯಕ್ಷರಾಗಿ ಹರೀಶ ಮಾಂಬಾಡಿ, ಉಪಾಧ್ಯಕ್ಷರಾಗಿ ರಮೇಶ್ ಕೆ. ಪುಣಚ (ವಿಷ್ಣುಗುಪ್ತ), ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ ವಿಟ್ಲ, ಜತೆಕಾರ್ಯದರ್ಶಿಯಾಗಿ ಅಬ್ದುಲ್ ರಹಿಮಾನ್ ತಲಪಾಡಿ ಮತ್ತು ಕೋಶಾಧಿಕಾರಿಯಾಗಿ ಯಾದವ ಕುಲಾಲ್ ಅಗ್ರಬೈಲು ಸರ್ವಾನುಮತದಿಂದ ಆಯ್ಕೆಗೊಂಡರು.

ಹರೀಶ ಮಾಂಬಾಡಿ

ಮಹಮ್ಮದ್ ಆಲಿ ವಿಟ್ಲ

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago