ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದು ಡಿವೈಎಸ್ಪಿ ಸುಧೀರ್ ಎಂ.ಹೆಗಡೆ ಹೇಳಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಮಂಗಳೂರು, ರೋಟರಿ ಕ್ಲಬ್ ಬಂಟ್ವಾಳ ಸಹಯೋಗದೊಂದಿಗೆ ಭ್ರಷ್ಟಾಚಾರ ನಿರ್ಮೂಲನೆಯ ಬಗ್ಗೆ ಮಾಹಿತಿ ಮತ್ತು ಜನಸಂಪರ್ಕ ಸಭೆ ಬಂಟ್ವಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರ್ಥಿಗಳು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಜಾಗೃತರಾಗಿ ರಚನಾತ್ಮಕ ಪಾತ್ರ ನಿರ್ವಹಿಸಿದರೆ ಇದು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ ಮಾತನಾಡಿ, ಇಂದು ಭ್ರಷ್ಟಾಚಾರ ಎಂಬುದು ದೇಶದ ದೊಡ್ಡ ಪಿಡುಗಾಗಿದೆ ಎಂದು ಹೇಳಿದರು.
ರೋಟರಿ ಕ್ಲಬ್ ಕಾರ್ಯದರ್ಶಿ ಶಿವಾನಿ ಬಾಳಿಗ, ಕಾಲೇಜು ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ ಭಟ್, ಎಸಿಬಿ ಇನ್ಸ್ ಪೆಕ್ಟರ್ ಯೋಗೀಶ ನಾಯ್ಕ್, ರೋಟರಿ ಸದಸ್ಯರಾದ ವಸಂತ ಪ್ರಭು, ವಸಂತ್ ರಾವ್, ಪ್ರಕಾಶ್ ಬಾಳಿಗಾ, ಸಂದೀಪ್ ಮಿನೇಜಸ್, ಕೆ.ಎನ್. ಹೆಗ್ಡೆ, ರೋಟರ್ಯಾಕ್ಟ್ ಕೋಆರ್ಡಿನೇಟರ್ ಉಪನ್ಯಾಸಕ ನಂದಕಿಶೋರ್ ಮತ್ತಿತರರು ಉಪಸ್ಥಿತರಿದ್ದರು.