ಪ್ರಮುಖ ಸುದ್ದಿಗಳು

ಸಂತು ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರಿನ ನಾಲ್ಕನೇ ಹೆಚ್ಚುವರಿ ಸೆಶನ್ಸ್ ನ್ಯಾಯಾಲಯವು ಪೊಳಲಿಯ ಸಂತು ಅಲಿಯಾಸ್ ಸಂತೋಷ್  ಕೊಲೆ ಆರೋಪಿಗಳಾದ ಇಕ್ಬಾಲ್ ಕಾವೂರು ಮತ್ತು ಫಾರೂಕ್ ಕಾರ್ಕಳ ಎಂಬಿಬ್ಬರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 1 ಲಕ್ಷ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಜಾಹೀರಾತು

2009ರ ಫೆ.18ರಂದು ಬೆಳಗ್ಗೆ 9.30ರ ವೇಳೆಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದ ಸಂತು ಅಲಿಯಾಸ್ ಸಂತೋಷ್ ಎಂಬಾತನಿಗೆ ನೀಲಿ ಬಣ್ಣದ ಕಾರಿನಲ್ಲಿ ಬಂದ ಅಪರಿಚಿತ ಗುಂಪೊಂದು ತಲೆ, ಹೊಟ್ಟೆಯ ಭಾಗಕ್ಕೆ ಕತ್ತಿಯಿಂದ ಕಡಿದು ತೀವ್ರವಾಗಿ ಗಾಯಗೊಳಿಸಿತ್ತು. ಈ ಘಟನೆಯಲ್ಲಿ ಸಂತೋಷ್ ಮೃತಪಟ್ಟಿದ್ದರು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು 22 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆಯನ್ನು ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ನಂಜುಂಡೇಗೌಡ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಬಹುಮಾನ ಘೋಷಿಸಿರುವುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ