ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಕ್ರೀಡಾ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿಟ್ಲ ರೋಟರಿ ಕ್ಲಬ್ ಸಹಯೋಗದಲ್ಲಿ ವಿಟ್ಲ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಬಳಿಯಿರುವ ಅರಮನೆ ಗದ್ದೆಯಲ್ಲಿ ಜು.21ರಂದು ಕೆಸರ್‌ಡೊಂಜಿ ದಿನ ಕಾರ್ಯಕ್ರಮ ನಡೆಯಲಿದೆ.
ವಿಟ್ಲ ಅರಮನೆಯ ವಿ. ಜನಾರ್ದನ ವರ್ಮ ಅರಸರು ಉದ್ಘಾಟಿಸುತ್ತಾರೆ. ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್ ಅಧ್ಯಕ್ಷತೆ ವಹಿಸುತ್ತಾರೆ. ಮುಖ್ಯ ಅತಿಥಿಗಳು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ವಿಟ್ಲ, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ, ವಿಟ್ಲ ಮಾದರಿ ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಸುಬ್ರಾಯ ಪೈ, ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ಹಿರಿಯ ವೈದ್ಯಾಽಕಾರಿ ಡಾ| ಪ್ರಶಾಂತ ಬಿ. ಎನ್., ಜೆಸಿಐ ಸೆನೆಟರ್ ಬಾಬು ಕೆ. ವಿ. ಅವರು ಭಾಗವಹಿಸಲಿದ್ದಾರೆ.
ಅಪರಾಹ್ನ ಘಂಟೆ ೩ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ವಿಟ್ಲ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಸೇರಾಜೆ ಸುಬ್ರಹ್ಮಣ್ಯ ಭಟ್, ವಿಟ್ಲ ಗ್ರಾ.ಪಂ.ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ, ವಿಟ್ಲ ಬೆನಕ ಕ್ಲಿನಿಕ್‌ನ ಡಾ| ಅರವಿಂದ್, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ. ಹರೀಶ್ ನಾಯಕ್, ವಿಟ್ಲ ಹವ್ಯಕ ವಲಯ ಅಧ್ಯಕ್ಷ ಚಂದ್ರಶೇಖರ ಭಟ್ ಪಡಾರು , ಇಟ್ಟೆಲ್ ತುಳು ಕೂಟದ ಅಧ್ಯಕ್ಷ ಹರೀಶ್ ಪೂಜಾರಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಿಽ ಶೋಧ, ಓಟ ಮತ್ತಿತರ ಸ್ಪರ್ಧೆಗಳು ನಡೆಯಲಿವೆ ಎಂದು ಸೇವಾ ಸಮಿತಿ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ ಹಾಗೂ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)