ಬಂಟ್ವಾಳ

ಪುರಸಭೆ ಚುನಾವಣೆ ತಯಾರಿ: ಬಿಜೆಪಿ ಶಕ್ತಿಕೇಂದ್ರ ಸಭೆ

ಸದ್ಯದಲ್ಲೇ ಚುನಾವಣೆ ಘೋಷಣೆಯಾಗುವ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭೆಗೆ ಬಿಜೆಪಿ ತನ್ನ ತಯಾರಿ ಆರಂಭಿಸಿದೆ. ಪುರಸಭಾ ವ್ಯಾಪ್ತಿಯ ಪ್ರಮುಖರು, ಕಾರ್ಯಕರ್ತರ ಸಭೆಯೊಂದು ಇಲ್ಲಿನ ರಂಗೋಲಿ ಹೋಟೆಲ್ ನಲ್ಲಿ ನಡೆಯಿತು. ಪುರಸಭಾ ವ್ಯಾಪ್ತಿಯ ಶಕ್ತಿಕೇಂದ್ರದ ಪ್ರಮುಖರು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಸೇರಿ ಚರ್ಚೆ ನಡೆಸಿದರು.

ಜಾಹೀರಾತು

ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರ.ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ ,ಮೋನಪ್ಪ ದೇವಸ್ಯ,ಪುರಸಭೆಯ ಹಿರಿಯ ಸದಸ್ಯ ಗೋವಿಂದ ಪ್ರಭು, ಮಾಜಿ ಅಧ್ಯಕ್ಷ ದಿನೇಶ್ ಭಂಡಾರಿ, ಜಿಪಂ ಮಾಜಿ ಸದಸ್ಯ ಚನ್ನಪ್ಪ ಕೋಟ್ಯಾನ್, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ,ಎಸ್ಸಿ ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು, ಮೂರು ಗ್ರಾಮಗಳ ಅಧ್ಯಕ್ಷರುಗಳಾದ ಕೃಷ್ಣಪ್ಪ ಪೂಜಾರಿ, ಪ್ರಮೋದ್ ಅಜ್ಜಿಬೆಟ್ಡು, ಸುದರ್ಶನ್, ಶಕ್ತಿ ಕೇಂದ್ರದ ಅಧ್ಯಕ್ಷ ಗೋಪಾಲ ಸುವರ್ಣ  ಹಾಗೂ ಪುರಸಭೆಯ ಬಿಜೆಪಿ ಸದಸ್ಯರಾದ ಭಾಸ್ಕರ್ ಟೈಲರ್, ಸುಗುಣ ಕಿಣಿ, ಸಂಧ್ಯಾ ನಾಯ್ಕ್  ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ ಪುರಸಭೆಗೆ ಸಂಬಂಧಿಸಿ ಬಿಜೆಪಿ ಪುರಸಭಾ ವ್ಯಾಪ್ತಿಯ ಪ್ರಮುಖರ, ಕಾರ್ಯಕರ್ತರ ಸಭೆ ಇದಾಗಿದೆ. ಸೆ.8 ರಂದು ಪುರಸಭೆಯ ಆಡಳಿತಾವಧಿ ಪೂರ್ಣಗೊಳ್ಳಲಿದ್ದು, ಯಾವುದೇ ಸಮಯದಲ್ಲಿ ಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇದೆ.  ಕಾಂಗ್ರೆಸ್’ ಕೈ’ ಯಲ್ಲಿರುವ ಬಂಟ್ವಾಳ ಪುರಸಭೆಯಲ್ಲಿ ಶತಾಯ-ಗತಾಯವಾಗಿ ಕಮಲ ‌ಅರಳಿಸಲು ಶಾಸಕ ಯು.ರಾಜೇಶ್ ನಾಯ್ಕ್ ನೇತೃತ್ವದಲ್ಲಿ  ಪ್ರಮುಖರು  ತಂತ್ರಗಾರಿಕೆ ರೂಪಿಸಿದ್ದಾರೆ. 23 ಸದಸ್ಯ ಬಲವಿದ್ದ ಪುರಸಭೆ 4 ಸದಸ್ಯ ಬಲವನ್ನು ಹೆಚ್ಚಿಸಿಕೊಂಡು 27 ಕ್ಕೇರಿದ ಬಳಿಕ ಇದು ಮೊದಲ ಚುನಾವಣೆಯಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ