ಬಡ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಷ್ಟೇ ಅಲ್ಲ, ಖಾಸಗಿ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಲ್ಲೂ ವ್ಯಾಸಂಗ ಮಾಡುತ್ತಿದ್ದಾರೆ. ಸರಕಾರಿ ಕಾಲೇಜು, ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆ ಸ್ವಾಗತಾರ್ಹ ಆದರೆ ಇದನ್ನು ಖಾಸಗಿಯವರಿಗೂ ನೀಡಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ವತಿಯಿಂದ ತಹಶೀಲ್ದಾರ್ ಮೂಲಕ ಮಂಗಳವಾರ ಬೆಳಗ್ಗೆ ಮನವಿ ಸಲ್ಲಿಸಲಾಯಿತು.
ಜಾಹೀರಾತು
ತಾಲೂಕು ಸಂಚಾಲಕ ಆಶಿಷ್ ಅಜ್ಜಿಬೆಟ್ಟು ನೇತೃತ್ವದಲ್ಲಿ ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಮನವಿ ಅರ್ಪಿಸಿದರು. ಈ ಸಂದರ್ಭ ವಿಭಾಗ ಸಹಸಂಚಾಲಕ ಶೀತಲ್ ಕುಮಾರ್, ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಉಪಸ್ಥಿತರಿದ್ದರು. ಸುಮಾರು 250 ವಿದ್ಯಾರ್ಥಿಗಳು ಈ ಸಂದರ್ಭ ಭಾಗವಹಿಸಿದ್ದರು. ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಮನವಿ ಸ್ವೀಕರಿಸಿದರು. ಈ ಸಂದರ್ಭ ನಗರ ಠಾಣಾ ಎಸ್.ಐ. ಚಂದ್ರಶೇಖರ್ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಖಾಸಗಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒತ್ತಾಯಿಸಿ ಎಬಿವಿಪಿ ಮನವಿ"
Be the first to comment on "ಖಾಸಗಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒತ್ತಾಯಿಸಿ ಎಬಿವಿಪಿ ಮನವಿ"