ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಂಟ್ವಾಳ ತಾಲೂಕು ಪೆರ್ನೆ ಶ್ರೀರಾಮಚಂದ್ರ ಪ್ರೌಢ ಶಾಲೆ ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಡಿ.ಆರ್.ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜು. 21ರಂದು ಗುರುವಾಯನಕೆರೆ ನಮ್ಮೂರ ಪ್ರೌಢ ಶಾಲೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನಿಕಟಪೂರ್ವ ಅಧ್ಯಕ್ಷ ಮಹಾಬಲ ಕುಳ ಸಭಾಧ್ಯಕ್ಷತೆ ವಹಿಸಿದ್ದರು.
ಕಾರ್ಯದರ್ಶಿಯಾಗಿ ಮಂಗಳೂರು ಹೊಗೆಬಜಾರ್ ಸರಕಾರಿ ಪ್ರೌಢ ಶಾಲೆಯ ಮುರಳಿಧರ ಆಚಾರ್ ಎನ್., ಕೋಶಾಽಕಾರಿಯಾಗಿ ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢ ಶಾಲೆಯ ಸದಾನಂದ ಬಿರಾದಾರ ಆಯ್ಕೆಯಾಗಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…