ಕಂದಾಯ ಅದಾಲತ್ ನಿಂದ ಸರಕಾರದ ಯೋಜನೆ ಜನರ ಬಳಿಗೆ: ರಾಜೇಶ್ ನಾಯ್ಕ್

 

ಜಾಹೀರಾತು

ಸರಕಾರದ ಯೋಜನೆಗಳನ್ನು ಜನರ ಬಳಿ ತಲುಪಿಸಲು ಕಂದಾಯ ಅದಾಲತ್ ಸಹಕಾರಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.

ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ಪಾಣೆಮಂಗಳೂರು ಹೋಬಳಿ ಮಟ್ಟದ ಕಂದಾಯ ಮತ್ತು ಪಿಂಚಣಿ ಅದಾಲತ್ ಉದ್ಘಾಟಿಸಿ ಮಾತನಾಡಿದರು.

ಕಂದಾಯ ಇಲಾಖೆಯ ಸೌಕರ್ಯಗಳನ್ನು ಸದುಪಯೋಗಪಡಿಸಲು ಕರೆ ನೀಡಿದ ಅವರು, ಜನರ ಬಳಿ ಸರಕಾರದ ಯೋಜನೆ ತಲುಪಿಸಲು ಸಹಕಾರಿಯಾಗುವಂತೆ ಕೆಲಸ ಮಾಡುವೆ ಎಂದು ಹೇಳಿದರು. ತಾಲೂಕು ಕಚೇರಿಯಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಜನಸಾಮಾನ್ಯರಿಂದ ದೂರುಗಳು ಬಾರದಂತೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಈ ಸಂದರ್ಭ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಕಮಲಾಕ್ಷಿ ಪೂಜಾರಿ ಮತ್ತು ರವೀಂದ್ರ ಕಂಬಳಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಬಂಗೇರ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಪುರಸಭಾ ಸದಸ್ಯರಾದ ಪ್ರಭಾ ಆರ್. ಸಾಲಿಯಾನ್, ಜಗದೀಶ ಕುಂದರ್, ತಾಪಂ ಸದಸ್ಯರಾದ ಗಣೇಶ ಸುವರ್ಣ, ಯಶವಂತ ಪೊಳಲಿ, ಪ್ರಮುಖರಾದ ಪುರುಷ ಎನ್. ಸಾಲಿಯಾನ್,, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ಪ್ರಭಾರ ಉಪತಹಶೀಲ್ದಾರ್ ಗ್ರೆಟ್ಟಾ ಮಸ್ಕರೇನ್ಹಸ್,  ಸಿಬ್ಬಂದಿಗಳಾದ ಸದಾಶಿವ ಕೈಕಂಬ, ಸುಂದರ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಂದಾಯ ಅದಾಲತ್ ನಿಂದ ಸರಕಾರದ ಯೋಜನೆ ಜನರ ಬಳಿಗೆ: ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*