ಸರಕಾರದ ಯೋಜನೆಗಳನ್ನು ಜನರ ಬಳಿ ತಲುಪಿಸಲು ಕಂದಾಯ ಅದಾಲತ್ ಸಹಕಾರಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.
ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ಪಾಣೆಮಂಗಳೂರು ಹೋಬಳಿ ಮಟ್ಟದ ಕಂದಾಯ ಮತ್ತು ಪಿಂಚಣಿ ಅದಾಲತ್ ಉದ್ಘಾಟಿಸಿ ಮಾತನಾಡಿದರು.
ಕಂದಾಯ ಇಲಾಖೆಯ ಸೌಕರ್ಯಗಳನ್ನು ಸದುಪಯೋಗಪಡಿಸಲು ಕರೆ ನೀಡಿದ ಅವರು, ಜನರ ಬಳಿ ಸರಕಾರದ ಯೋಜನೆ ತಲುಪಿಸಲು ಸಹಕಾರಿಯಾಗುವಂತೆ ಕೆಲಸ ಮಾಡುವೆ ಎಂದು ಹೇಳಿದರು. ತಾಲೂಕು ಕಚೇರಿಯಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಜನಸಾಮಾನ್ಯರಿಂದ ದೂರುಗಳು ಬಾರದಂತೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಈ ಸಂದರ್ಭ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಕಮಲಾಕ್ಷಿ ಪೂಜಾರಿ ಮತ್ತು ರವೀಂದ್ರ ಕಂಬಳಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಬಂಗೇರ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಪುರಸಭಾ ಸದಸ್ಯರಾದ ಪ್ರಭಾ ಆರ್. ಸಾಲಿಯಾನ್, ಜಗದೀಶ ಕುಂದರ್, ತಾಪಂ ಸದಸ್ಯರಾದ ಗಣೇಶ ಸುವರ್ಣ, ಯಶವಂತ ಪೊಳಲಿ, ಪ್ರಮುಖರಾದ ಪುರುಷ ಎನ್. ಸಾಲಿಯಾನ್,, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ಪ್ರಭಾರ ಉಪತಹಶೀಲ್ದಾರ್ ಗ್ರೆಟ್ಟಾ ಮಸ್ಕರೇನ್ಹಸ್, ಸಿಬ್ಬಂದಿಗಳಾದ ಸದಾಶಿವ ಕೈಕಂಬ, ಸುಂದರ ಉಪಸ್ಥಿತರಿದ್ದರು.