ಅತ್ಯಂತ ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಅತ್ಯಂತ ಅವಶ್ಯಕ ಎಂದು ಪಾಣೆಮಂಗಳೂರು ಎಸ್.ಎಲ್ ಎನ್.ಪಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ರಮಾ ಎಸ್. ಭಂಡಾರಿ ಹೇಳಿದರು.
ಸಂಸ್ಥೆಯ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಹತ್ತು ದಿನಗಳ ಅವಧಿಯ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ನಿವೃತ್ತ ಉಪನ್ಯಾಸಕ ರಾಜಮಣಿ ರಾಮಕುಂಜ ಅವರು ಶಿಬಿರವನ್ನು ನಡೆಸಿಕೊಟ್ಟರು. ಶೈಲಜ ಹಾಗೂ ಸೌಮ್ಯ ಶಿಬಿರದ ಅನುಭವವನ್ನು ಹಂಚಿಕೊಂಡರು.
ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ ಸೋಮಯಾಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ರಮೇಶ್ ಅವರು ವಂದಿಸಿದರು.