ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ಜುಲೈ 28ರಂದು ಶಿಕ್ಷಕ – ರಕ್ಷಕ ಸಂಘದ ಮಹಾಸಭೆ ಸಡೆಯಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಲ್ಯ ವಹಿಸಿದ್ದರು. ಎಸ್.ವಿ.ಎಸ್. ವಿದ್ಯಾಸಂಸ್ಥೆಗಳಲ್ಲಿ 34 ವರ್ಷಗಳ ಕರ್ತವ್ಯ ಸಲ್ಲಿಸಿ ಸ್ವಯಂನಿವೃತ್ತಿಗೊಂಡ ಶಿಕ್ಷಕಿ ವೀರಾ ಸಿಕ್ವೇರಾ ಅವರನ್ನು ಶಿಕ್ಷಕ – ರಕ್ಷಕ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಮುಂದೆ ಪ್ರಸಕ್ತ ಶೈಕ್ಷಣಿಕ ವರ್ಷದ ಸಂಘದ ಪದಾಧಿಕಾರಿಗಳು ಮತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಅಧ್ಯಕ್ಷರಾಗಿ ಸಂಪತ್ ಕುಮಾರ್ ಶೆಟ್ಟಿ ಆಯ್ಕೆಯಾದರು. ಅನಿತಾ ಮೆನೇಜಸ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಜೂಲಿ ಟಿ.ಜೆ. ಸ್ವಾಗತಿಸಿದರು. ಶಾಲಾ ಪ್ರಾಂಶುಪಾಲರಾದ ರಮಾಶಂಕರ್ ಹಾಗೂ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)