ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ಸೋಮವಾರ ವಿದ್ಯಾಭಾರತಿಯ ಕರ್ನಾಟಕ ಪ್ರಾಂತಕ್ಕೊಳಪಟ್ಟ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ನಡೆಯಿತು.
ಜಾಹೀರಾತು
ಈ ಸಂದರ್ಭ ಕಾರ್ಯಕ್ರಮವನ್ನು ಹಿರಿಯ ಕಬಡ್ಡಿ ಆಟಗಾರರಾದ ವೆಂಕಟ್ರಮಣ ಬಳ್ಳುಕರಾಯ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಹಿಸಿದ್ದರು. ವಿದ್ಯಾಭಾರತಿ ಪ್ರಾಂತ ಕಾರ್ಯದರ್ಶಿ ವಸಂತ ಮಾಧವ, ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಎನ್, ವಿದ್ಯಾಭಾರತಿ ಪ್ರಾಂತ ನೈತಿಕ, ಆಧ್ಯಾತ್ಮಿಕ ವಿಷಯ ಪ್ರಮುಖರಾದ ವೆಂಕಟ್ರಮಣ ರಾವ್ ಈ ಸಂದರ್ಭ ಉಪಸ್ಥಿತರಿದ್ದರು. ಮಧ್ಯಾಹ್ನದ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕಬಡ್ಡಿ ಪಂದ್ಯಾಕೂಟವನ್ನು ವೀಕ್ಷಿಸಿದರು.
ಕಾರ್ಯಕ್ರಮವನ್ನು ಜಿನ್ನಪ್ಪ ಏಳ್ತಿಮಾರ್ ನಿರೂಪಿಸಿದರು. ಮನೋಜ್ ರೈ ಸ್ವಾಗತಿಸಿದರು. ಗೋಪಾಲ ಎಂ. ವಂದಿಸಿದರು. 18 ಜಿಲ್ಲೆಗಳಿಂದ ಕಬಡ್ಡಿ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿವೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಲ್ಲಡ್ಕದಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಕೂಟ"
Be the first to comment on "ಕಲ್ಲಡ್ಕದಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಕೂಟ"