ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ಭಾನುವಾರ ಆಗಸ್ಟ್ 5ರಂದು ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಲಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉದ್ಘಾಟಿಸಲಿದ್ದು, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸುವರು. ಸಂಪನ್ಮೂಲ ವ್ಯಕ್ತಿಯಾಗಿ ದಯಾನಂದ ಕತ್ತಲಸಾರ್ ಭಾಗವಹಿಸಲಿದ್ದು, ಮುಖ್ಯ ಅತಿಥಿಯಾಗಿ ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಯೋಜನಾಧಿಕಾರಿ ಜಯಾನಂದ ಪಿ, ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ರೊನಾಲ್ಡ್ ಡಿಸೋಜ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)