ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ೧೯ನೇ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ನ ಹಾಲ್ ನಲ್ಲಿ ವಲಯಾಧ್ಯಕ್ಷ ಹರೀಶ್ ಮಾಣಿ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಾಸಭೆಯನ್ನು ಜಿಲ್ಲಾ ಅಧ್ಯಕ್ಷರಾದ ವಿಲ್ಸನ್ ಗೋನ್ಸಾಲ್ವಿಸ್ ಅವರು ಉದ್ಘಾಟಿಸಿ, ಇಂದಿನ ದಿನಗಳಲ್ಲಿ ಛಾಯಾಗ್ರಾಹಕರು ಎದುರಿಸುತ್ತಿರುವ ಸಮಸ್ಯೆ ಕುರಿತು ಮಾಹಿತಿ ನೀಡಿ ಸಂಘಟನೆ ಅವಶ್ಯದ ಕುರಿತು ವಿವರಿಸಿದರು.
ವಲಯ ಗೌರವಾಧ್ಯಕ್ಷ ಸುಕುಮಾರ್ ಬಂಟ್ವಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ್, ಜಿಲ್ಲಾ ಸಮಿತಿಯ ಉಪಾಧ್ಯಕ್ಷಾರದ ಸುಧೀರ್ ಶೆಟ್ಟಿ ಮತ್ತು ಬ್ಯಾಂಕಿನ ನಿರ್ದೇಶಕ ಹರೀಶ್ ರಾವ್ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ನೂತನವಾಗಿ ಮನೆ ನಿರ್ಮಿಸಿದ ಸದಸ್ಯರನ್ನು ಅಭಿನಂದಿಸಲಾಯಿತು.ನೂತನವಾಗಿ ಸ್ಡುಡಿಯೋ ಮಾಡಿದ ಸದಸ್ಯರನ್ನು ಅಭಿನಂದಿಸಲಾಯಿತು.
ಗೌರವಾಧ್ಯಕ್ಷ ಸುಕುಮಾರ್ ಬಂಟ್ವಾಳ್ ಸ್ವಾಗತಿಸಿದರು. ಉಪಾಧ್ಯಕ್ಷರಾದ ಹರೀಶ್ ಕುಂದರ್ ಗತ ವರ್ಷದ ವರದಿ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ರೋಶನ್ ಕಲ್ಲಡ್ಕ ವಾರ್ಷಿಕ ವರದಿ ಮಂಡಿಸಿ ಕೋಶಾಧಿಕಾರಿ ಬಾಲಕ್ರಷ್ಣ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಕ್ರೀಡಾ ಕಾರ್ಯದರ್ಶಿ ರಿಚ್ಚರ್ಡ್ ವಾಮದಪದವು ಧನ್ಯವಾದವಿತ್ತರು, ಎಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು.
Be the first to comment on "ಫೊಟೋಗ್ರಾಫರ್ಸ್ ಅಸೋಸಿಯೇಶನ್ ನ 19ನೇ ವಾರ್ಷಿಕ ಮಹಾಸಭೆ"