ಸ್ವಚ್ಛ ಸರ್ವೇಕ್ಷಣ ರಥಯಾತ್ರೆಗೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಕೇಂದ್ರ ಸರಕಾರವು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಸರ್ವೇಕ್ಷಣ ರಥಯಾತ್ರೆಯ ವಾಹನಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಬುಧವಾರ ಶಾಸಕ ರಾಜೇಶ್ ನಾಯ್ಕ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಜಾಹೀರಾತು

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಈ ಸ್ವಚ್ಛ ಸರ್ವೇಕ್ಷಣ ರಥಯಾತ್ರೆಯು ಬಂಟ್ವಾಳ ತಾಲೂಕಿನ 58 ಗ್ರಾಮ ಪಂಚಾಯತ್‌ಗಳಿಗೆ ಸಂಚರಿಸಲಿದ್ದು, ಜನರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಿದೆ ಎಂದರು.

ಕೇಂದ್ರ ಸರಕಾರವು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಗ್ರಾಮಗಳಲ್ಲಿರುವ ಸಾರ್ವಜನಿಕ ಶೌಚಾಲಯ, ಸರಕಾರಿ ಶಾಲೆಗಳು, ಅಂಗನವಾಡಿಗಳು, ಸಂತೆ ನಡೆಯುವ ಸ್ಥಳ, ಪ್ರಾಥಮಿಕ  ಆರೋಗ್ಯ ಕೇಂದ್ರ, ಕುಡಿಯುವ ನೀರಿನ ಸ್ಥಳಗಳು, ಪಂಚಾಯತ್ ಕಚೇರಿ, ಧಾರ್ಮಿಕ ಸ್ಥಳಗಳು, ಮುಖ್ಯ ಬೀದಿಗಳು ಇತ್ಯಾದಿ ಸ್ಥಳಗಳಲ್ಲಿ ಶುಚಿತ್ವವನ್ನು ಕಾಪಾಡುವ ಮೂಲಕ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ -೨೦೧೮ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಅವರು ಹೇಳಿದರು. ಈ ಸಂದರ್ಭ ಜಿಪಂ ಸದಸ್ಯ ತುಂಗಪ್ಪ ಬಂಗೇರ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಸ್ವಚ್ಛ ಭಾರತ ಮಿಷನ್‌ನ ಜಿಲ್ಲಾ ಸಮಾವೇಶಕ ಸಂಶೀರ್, ಸದಸ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು. ಇಒ ರಾಜಣ್ಣ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಸ್ವಚ್ಛ ಸರ್ವೇಕ್ಷಣ ರಥಯಾತ್ರೆಗೆ ಶಾಸಕ ರಾಜೇಶ್ ನಾಯ್ಕ್ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*