ಬಂಟ್ವಾಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಟಾಸ್ಕ್ ಫೋರ್ಸ್ ಸಭೆ ಬಿ.ಸಿ.ರೋಡಿನ ಎಸ್.ಜಿ.ಎಸ್.ವೈ. ತರಬೇತಿ ಕೇಂದ್ರದ ಸಭಾಭವನದಲ್ಲಿ ಗುರುವಾರ ನಡೆಯಿತು.
ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಸರಕಾರ ನಿಗದಿಪಡಿಸಿದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಸರಿಯಾದ ರೀತಿಯಲ್ಲಿ ಹಂಚಿಕೆ ಮಾಡಬೇಕು ಎಂದು ಸೂಚನೆ ನೀಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ತಾಪಂ ಇಒ ರಾಜಣ್ಣ ಮತ್ತು ಅಧಿಕಾರಿ ನರೇಂದ್ರಬಾಬು ಉಪಸ್ಥಿತರಿದ್ದು ಮಾಹಿತಿ ನೀಡಿದರು.
ಇದೇ ವೇಳೆ ವಿವಿಧ ವಿಷಯಗಳ ಕುರಿತು ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳಾ ಮಾಧವ ಮಾವೆ, ಎಂ.ಎಸ್.ಮಹಮ್ಮದ್, ಪದ್ಮಶೇಖರ ಜೈನ್ ಚಂದ್ರಪ್ರಕಾಶ್ ಶೆಟ್ಟಿ, ತುಂಗಪ್ಪ ಬಂಗೇರ, ತಾಪಂ ಸದಸ್ಯರಾದ ಉಸ್ಮಾನ್ ಕರೋಪಾಡಿ, ಶಿವಪ್ರಸಾದ್ ಕನಪಾಡಿ ಸಹಿತ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದು, ಸಲಹೆ ಸೂಚನೆ ನೀಡಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)