ಸುಮಾರು ಮೂವತ್ತು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲಾಗುವುದಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಿಳಿಸಿದ್ದಾರೆ.
ಗ್ರಾಮ ಸಹಾಯಕ ಸಂಘ ಬಂಟ್ವಾಳ ತಾಲೂಕು ವತಿಯಿಂದ ಭಾನುವಾರ ಶಾಸಕರ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ, ಗ್ರಾಮ ಸಹಾಯಕರು ಕಂದಾಯ ಇಲಾಖೆಯ ಬೆನ್ನೆಲುಗಾಗಿದ್ದು, ಅವರ ಕ್ಷೇಮಾಭಿವೃದ್ಧಿಗಾಗಿ ಯಾವುದೇ ಶಾಶ್ವತ ಯೋಜನೆ ಜಾರಿಯಾಗದೇ ಇರುವುದು ವಿಪರ್ಯಾಸ. ಈ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆದು, ಗ್ರಾಮ ಸಹಾಯಕರ ಸಮಸ್ಯೆ, ಬೇಡಿಕೆಗಳ ಕುರಿತು ಕಂದಾಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದಾಗಿ ಭರವಸೆ ನೀಡಿದರು.
ಗ್ರಾಮ ಸಹಾಯಕರ ಹುದ್ದೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮ ಸಹಾಯಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ರಾಘವ ಗೌಡ, ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ, ಅದ್ಯಕ್ಷ ಮೋಹನ್ ದಾಸ ಬಂಟ್ವಾಳ, ಸಂಘದ ತಾಲೂಕು ಕಾರ್ಯದರ್ಶಿ ಸುಂದರ ಬಿ.ಕೆ ಹಾಗೂ ಸಂಘದ ಸದಸ್ಯರು ಶಾಸಕರೊಂದಿಗೆ ಸಮಾಲೋಚನೆ ನಡೆಸಿದರು.
Be the first to comment on "ಗ್ರಾಮ ಸಹಾಯಕರ ಬೇಡಿಕೆಗೆ ಶಾಸಕರ ಸ್ಪಂದನೆ"