ಜೋಡುಮಾರ್ಗ ಜೇಸೀಗೆ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಪುರಸ್ಕಾರ

ಜೇಸೀ ಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನ ‘ಶಿಖರ ‘ ಕುಂದಾಪುರದ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ 5ರಂದು ಜರಗಿತು.
ಸಮಾರಂಭದಲ್ಲಿ ವಲಯ 15ರ ಅತ್ಯುತ್ತಮ 20 ಘಟಕಗಳನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು. ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ನೇತೃತ್ವದ  ಘಟಕದ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜೇಸಿ ವಲಯ 15ರ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರ್ ಪ್ರಶಸ್ತಿ ಪ್ರದಾನ ನೆರವೇರಿಸಿದರು. ಸಮಾರಂಭದಲ್ಲಿ ನಿಕಟ ಪೂರ್ವ ವಲಯಾಧ್ಯಕ್ಷರಾದ ಸಂತೋಷ್, ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ನಿರ್ದೇಶಕ ಕಾರ್ತಿಕೇಯ ಮಧ್ಯಸ್ಥ, ಸೌಮ್ಯ ರಾಕೇಶ್ ಉಪಸ್ತಿತರಿದ್ದರು.  ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಪೂರ್ವಾಧ್ಯಕ್ಷರಾದ ಉಮೇಶ್ ನಿರ್ಮಲ್,  ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್, ಕಾರ್ಯದರ್ಶಿ ಹರ್ಷರಾಜ್, ಜೇಸಿರೆಟ್ ವಿಭಾಗದ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಅಮಿತಾ ಹರ್ಷರಾಜ್ ಘಟಕದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿದ್ದರು. ಇದೇ ಸಂದರ್ಭ ದಲ್ಲಿ ಜೇಸೀ ಪೂರ್ವಾಧ್ಯಕ್ಷರಾದ ಉಮೇಶ್ ನಿರ್ಮಲ್ ರಿಗೆ ಜೇಸೀ ಐ ಸೆನೆಟರ್ ಹಾಗೂ ಜೇಸೀ ಹರ್ಷರಾಜ್, ಜೇಸಿರೆಟ್ ವಿಭಾಗದ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಸವಿತಾ ನಿರ್ಮಲ್, ಶನ್ ಪತ್ ಷರೀಪ್ ಇವರಿಗೆ ಎಚ್ ಜಿ ಎಫ್ ಪುರಸ್ಕಾರದ ಗೌರವಾರ್ಪಣೆ ಮಾಡಲಾಯಿತು .

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜೋಡುಮಾರ್ಗ ಜೇಸೀಗೆ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಪುರಸ್ಕಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*