ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಸಿದ್ಧತಾ ಸಭೆ ಬಂಟ್ವಾಳ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಸಹಾಯಕ ಆಯುಕ್ತರಾದ ರೇಣುಕಾ ಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಹಶೀಲ್ದಾರರಾದ ಪುರಂದರ ಹೆಗ್ಡೆ, ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಮಾಸ್ಟರ್ ಟ್ರೈನರ್ ನಾರಾಯಣ ಭಂಡಾರಿ, ವೃತ್ತ ನಿರೀಕ್ಷಕ ನಾಗರಾಜ್, ಪ್ರಭಾರಉಪ ತಹಶೀಲ್ದಾರರಾದ ಸೀತಾರಾಮ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಪುರಸಭೆ ಅಧಿಕಾರಿಗಳು,ಗ್ರಾಮ ಕರಣಿಕರು, ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್, ದ್ವಿತೀಯ ದರ್ಜೆ ಸಹಾಯಕ ವಿನಯ ನಾಗರಾಜ್ ಹಾಗೂ ಗ್ರಾಮ ಲೆಕ್ಕಾಧಿಕಾರಿ , ಬೂತು ಮಟ್ಟದ ಅಧಿಕಾರಿಗಳು ಹಾಜರಿದ್ದರು. ಇದೇ ಸಂದರ್ಭ ರಾಜಕೀಯ ಪಕ್ಷದ ಪ್ರತಿನಿಧಿಗಳ ಸಭೆ ನಡೆಸಿ ಚುನಾವಣಾ ಪೂರ್ವ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.