ರಾಷ್ಟ್ರೀಯ ಜಂತು ಹುಳ ನಿವಾರಣಾ ದಿನವಾದ ಆಗಸ್ಟ್ 10ರಂದು 1ರಿಂದ 5 ವರ್ಷದೊಳಗಿನ ಮಗುವಿಗೆ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಜಂತುಹುಳನಾಶಕ ಮಾತ್ರೆಗಳನ್ನು ನೀಡಲಾಗುತ್ತದೆ ಎಂದು ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರರಿಂದ 19 ವರ್ಷದೊಳಗಿನ ಮಕ್ಕಳಿಗೆ ಶಾಲೆ ಅಥವಾ ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರೆ ವಿತರಿಸಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.