ಚೆಸ್ ಪ್ರತಿಭೆ ಯಶಸ್ವಿ ಗೆ ಸನ್ಮಾನ ಸಮಾರಂಭ

ಸಾರ್ವಜನಿಕ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಟೌನ್, ಜೇಸೀ ಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಚೆಸ್ ಟೂರ್ನಮೆಂಟ್ 2018-19 ರ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸಮಾರಂಭ ಜರಗಿತು.

ಜಾಹೀರಾತು

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸನ್ಮಾನ ನೆರವೇರಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಗೆಲ್ಲುವ ಮನೋಭಾವ ಮೂಡಿಸುವ ಸ್ಪರ್ಧೆ ಚದುರಂಗ. ರಾಷ್ಟ್ರೀಯ ಅಂತರಾಷ್ಟೀಯ ಮಟ್ಟದಲ್ಲಿ ಚದುರಂಗ ಸ್ಪರ್ಧೆಗೆ ಮನ್ನಣೆ ಇರುವ ಈ ಸಂದರ್ಭ ದಲ್ಲಿ ಗ್ರಾಮೀಣ ಪ್ರದೇಶದ ಭಿನ್ನ ಸಾಮರ್ಥ್ಯದ ಕು.ಯಶಸ್ವಿ ಮ್ಯಾಂಚೆಸ್ಟರ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತೆಯನ್ನು ಅಭಿನಂದನಾ ಭಾಷಣ ಮಾಡಿದರು. ಈ ಪ್ರತಿಭೆಯನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಹಾಗೂ ಜೇಸೀ ಐ ಜೋಡುಮಾರ್ಗ ನೇತ್ರಾವತಿ ಗುರುತಿಸಿ ಗೌರವಿಸುವ ಮೂಲಕ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಮಕ್ಕಳಿಗೆ ಸ್ಫೂರ್ತಿಯಾಗಲಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಉಮೇಶ್ ನಿರ್ಮಲ್, ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್, ದ.ಕ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಗೌರವ ಸಲಹೆಗಾರರಾದ ಗಂಗಾಧರ ರೈ ಮಾಣಿ, ಬಂಟ್ವಾಳ ತಾಲ್ಲೂಕು ಸಂಘದ ಅಧ್ಯಕ್ಷರಾದ ಜಗದೀಶ್ ಉಪಸ್ತಿತರಿದ್ದರು. ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ ಸ್ವಾಗತ ನೀಡಿದರು. ಶಿಕ್ಷಕರಾದ ಚಿನ್ನಪ್ಪ ಕೆ ಧನ್ಯವಾದ ಸಮರ್ಪಣೆ ಮಾಡಿದರು. ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ ಶ್ರೀ ವಿದ್ಯಾ ಯಶಸ್ವಿ ಯ ಪರಿಚಯಿಸಿದರು .ಇಂಟರಾಕ್ಟ್ ಕ್ಲಬ್ ಸಂಯೋಜಕರಾದ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ಸಂಯೋಜಿಸಿದ್ದರು.

ಹಳ್ಳಿಯಿಂದ ಇಂಗ್ಲೆಂಡ್ ಗೆ: ಚೆಸ್ ಪ್ರತಿಭೆಯ ‘ಯಶಸ್ವಿ’ ನಡೆ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಚೆಸ್ ಪ್ರತಿಭೆ ಯಶಸ್ವಿ ಗೆ ಸನ್ಮಾನ ಸಮಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*