ರಾಜ ಮಹಾರಾಜರ ಕಾಲದಿಂದಲೂ ಪ್ರಸಿದ್ಧಿ ಪಡೆದ ಚದುರಂಗ ಆಟವು ವಿದ್ಯಾರ್ಥಿಗಳ ಮೆದುಳಿಗೆ ಶಕ್ತಿ ತುಂಬುವ ಆಟವಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿರುವುದು ತುಂಬಾ ಸಂತಸದ ವಿಷಯ ಎಂದು ಬಂಟ್ವಾಳ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಉಮೇಶ್ ನಿರ್ಮಲ್ ರವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ಟೌನ್ ರೋಟರಿ ಕ್ಲಬ್, ಜೋಡುಮಾರ್ಗ ಜೇಸಿ ಸಹಯೋಗದಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಚದುರಂಗ ಸ್ಫರ್ಧೆಯನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು.
ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಇವರುವಿದ್ಯಾರ್ಥಿಗಳಲ್ಲಿ ಏಕಾಗ್ರತೆ,ಗೆಲ್ಲುವ ಮನೋಭಾವ ಮೂಡಿಸುವ ಸ್ಫರ್ಧೆ ಚದುರಂಗ , ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೂ ಇಂದು ಚದುರಂU ಆಟದಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಫರ್ಧೆಗಳಲ್ಲಿ ಪ್ರಶಸ್ತಿ ಪಡೆಯುತ್ತಿರುವುದು ಸಂತಸದ ವಿಷಯ ಎಂದರು.
ಜೋಡುಮಾರ್ಗ ಜೇಸಿ ಅಧ್ಯಕ್ಷರಾದ ಸವಿತಾ ನಿರ್ಮಲ್, ದ.ಕ .ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಗೌರವ ಸಲಹೆಗಾರ ಗಂಗಾಧರ ರೈ ಮಾಣಿ, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷರಾದ ಜಗದೀಶ್ ಕಲ್ಲಡ್ಕ, ಇಂಟಾರ್‍ಯಾಕ್ಟ್ ಕ್ಲಬ್ ಅಧ್ಯಕ್ಷೆ ಶ್ರೀವಿದ್ಯಾ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಚಿನ್ನಪ್ಪ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.