ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಮಣಿಹಳ್ಳ ಎಂಬಲ್ಲಿ ಶನಿವಾರ ಸಂಭವಿಸಿದೆ.
ಜಾಹೀರಾತು
ಬಂಟ್ವಾಳ ತಾಲೂಕಿನ ಅಲ್ಲಿಪಾದೆ ನಿವಾಸಿಗಳಾದ, ಬೈಕ್ ಸವಾರ ಪ್ರವೀಣ್, ಸಹ ಸವಾರ ನಿತಿನ್ ಗಾಯಗೊಂಡವರು ಎಂದು ತಿಳಿದು ಬಂದಿದೆ.ಇವರಿಬ್ಬರು ಬಂಟ್ವಾಳದಿಂದ ಅಲ್ಲಿಪಾದೆ ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಮಣಿಹಳ್ಳ ಎಂಬಲ್ಲಿ ನಿಯಂತ್ರಣತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಂಟ್ವಾಳ ಟ್ರಾಫಿಕ್ ಠಾಣಾ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿ: ಸವಾರರಿಬ್ಬರಿಗೆ ಗಾಯ"