ಆಟಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರಗಳಾದ ಕಾರಿಂಜ ಮತ್ತು ನರಹರಿ ಪರ್ವತಗಳಲ್ಲಿ ಸುರಿವ ಮಳೆಯನ್ನು ಲೆಕ್ಕಿಸದೆ ನೂರಾರು ಮಂದಿ ಆಗಮಿಸಿ ತೀರ್ಥಸ್ನಾನ ಕೈಗೊಂಡರು.
ಜಾಹೀರಾತು
ನಸುಕಿನ ವೇಳೆಯೇ ಭಕ್ತರ ಸಾಲು ಕಂಡುಬಂತು. ಆಟಿ ಅಮಾವಾಸ್ಯೆ ಸಂದರ್ಭ ಇಲ್ಲಿನ ಪುಣ್ಯತೀರ್ಥಗಳ ಪವಿತ್ರ ಜಲದಲ್ಲಿ ಸ್ನಾನ ಮಾಡಿದರೆ, ಸರ್ವರೋಗ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದದೆ. ಈ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಅಸುಪಾಸಿನ ಪರವೂರಿನ ಭಕ್ತರು ಜಾತಿ, ಧರ್ಮ ಬೇಧವಿಲ್ಲದೆ ಪರ್ವತವೇರಿ ಕೆರೆಗಳಲ್ಲಿ ಮಿಂದು ದೇವರ ಆಶೀರ್ವಾದ ಪಡೆದರು.
ನರಹರಿ ಪರ್ವತ ದೇವಸ್ಥಾನದಲ್ಲಿ ಡಾ. ಆತ್ಮರಂಜನ್ ರೈಯವರ ನೇತೃತ್ವದ ನೂತನ ಜೀರ್ಣೋದ್ದಾರ ಸಮಿತಿ ಹಾಗೂ ಆಡಳಿತ ಮೋಕ್ತೆಸರರಾದ ಡಾ. ಪ್ರಶಾಂತ ಮಾರ್ಲ ಹಾಗೂ ಆಡಳಿತ ಮಂಡಳಿ, ಜಿರ್ಣೋದ್ಧಾರ ಸಮಿತಿ ಸಕಲ ವ್ಯವಸ್ಥೆಗಳನ್ನು ಮಾಡಿತ್ತು. ಬಂಟ್ವಾಳ ಪೊಲೀಸರು ಮತ್ತು ಗೃಹರಕ್ಷಕ ದಳದ ವತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಯಿತು. ಕಾರಿಂಜ ದೇವಸ್ಥಾನದಲ್ಲಿ ಜಿನರಾಜ ಆರಿಗ ನೇತೃತ್ವದಲ್ಲಿ ಆಡಳಿತ ಸಮಿತಿ ಸಕಲ ವ್ಯವಸ್ಥೆಗಳನ್ನು ಮಾಡಿತ್ತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸುರಿವ ಮಳೆ ಲೆಕ್ಕಿಸದೆ ಕಾರಿಂಜ, ನರಹರಿ ಪರ್ವತದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ"
Be the first to comment on "ಸುರಿವ ಮಳೆ ಲೆಕ್ಕಿಸದೆ ಕಾರಿಂಜ, ನರಹರಿ ಪರ್ವತದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ"