ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ. ಕಸ್ಬಾ ಗ್ರಾಮದ ಐದನೇ ವಾರ್ಡಿನ ಸಭೆ ಎಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು ಈ ಸಂದರ್ಭ ಮುಖಂಡ ವಿಶ್ವನಾಥ ಚೆಂಡ್ತಿಮಾರ್ ಬಿಜೆಪಿಗೆ ಸೇರ್ಪಡೆಗೊಂಡರು.
ಸಭೆಯಲ್ಲಿ ಜಿಲ್ಲಾ ಎಸ್.ಸಿ ಮೋರ್ಚಾದ ಅಧ್ಯಕ್ಷರಾದ ದಿನೇಶ್ ಅಮ್ಟೂರು ಮಾತನಾಡಿ ಪಕ್ಷದ ವಿಚಾರಧಾರೆ ಅರಿತುಕೊಂಡು ಹಿರಿಯರ ಮಾರ್ಗದರ್ಶನವನ್ನು ಪಡೆದು ಎಲ್ಲಾ ಕಾರ್ಯಕರ್ತರು ಸೇರಿ ಭಾರತೀಯ ಜನತಾ ಪಾರ್ಟಿಯ ಬಲವರ್ಧನೆಗೆ ಶ್ರಮಿಸಬೇಕು ಎಂದು ಹೇಳಿದರು.
ಪುರಸಭೆ ಸದಸ್ಯರಾದ ಗೋವಿಂದ ಪ್ರಭುಗಳು ಮಾತನಾಡಿ ಬಂಟ್ವಾಳ ಪುರಸಭೆ ಭ್ರಷ್ಟಾಚಾರಗಳ ಬಗ್ಗೆ ಎಳೆ ಎಳೆಯಾಗಿ ಕಾರ್ಯಕರ್ತರಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಕಾರ್ಯಕರ್ತರೆಲ್ಲರೂ ಬಂಟ್ವಾಳ ಪುರಸಭೆಯ ಬಗ್ಗೆ ಪ್ರತಿ ಮನೆಯಲ್ಲಿ ಜಾಗೃತಿ ಮೂಡಿಸುವಂತಹ ಕೆಲಸ ಮಾಡಬೇಕಿದೆ ಎಂದರು.
ಈ ಸಂದರ್ಭಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುಗುಣಾ ಕಿಣಿ,ಕ್ ಷೇತ್ರ ಕಾರ್ಯದರ್ಶಿ ಸೀತಾರಾಮ ಪೂಜಾರಿ,ಪುರಸಭಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಗುರುದತ್ತ್ ನಾಯಕ್, ಬಂಟ್ವಾಳ ಕಸ್ಬಾ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಚೆಂಡ್ತಿಮಾರ್ ಪ್ರಧಾನ ಕಾರ್ಯದರ್ಶಿ ಬೂತ್ ಸಮಿತಿ ಅಧ್ಯಕ್ಷರಾದ ಶಿವರಾಮ್ ಶೆಟ್ಟಿ ಜಕ್ರಿಬೆಟ್ಟು ಕಾರ್ಯದರ್ಶಿಯಾದ ಉಮಾಶಂಕರ್ ಪೂಜಾರಿ ಚೆಂಡ್ತಿಮಾರ್ ಪ್ರಮುಖ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)