ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಬಂಟ್ವಾಳ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಬುಧವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದದ ಮುಂಭಾಗ ನಡೆಸಲಾಯಿತು. ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ರಾಷ್ಟ್ರಧ್ವಜಾರೋಹಣ ನೆರೆವೇರಿಸಿದರು. ಬಳಿಕ ವಿವಿಧ ತುಕುಡಿಗಳ ಪಥಸಂಚಲನ ನಡೆದು ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ತಾ.ಪಂ. ಅಧ್ಯಕ್ಷ ಚಂದ್ರಹಾಸಕರ್ಕೆರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಉಪವಿಭಾಗದ ಎಎಸ್ಪಿ ಋಷಿಕೇಶ್ ಸೋನಾವಣೆ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಹಾಜರಿದ್ದು ಗೌರವವಂದನೆ ಸ್ವೀಕರಿಸಿದರು.
ಬಳಿಕ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ರಾಜೇಶ್ ನಾಕ್, ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಜನ ಬಲಿದಾನ ಮಾಡಿದ್ದಾರೆ. ಅವರೆಲ್ಲರನ್ನು ಸ್ವಾತಂತ್ರ್ಯ ದಿನದಂದು ನೆನೆಪಿಸಿಕೊಳ್ಳಬೇಕಾಗಿದೆ. ಸ್ವಾತಂತ್ರವನ್ನು ಪಡೆಯಲು ಅನೇಕ ಮಂದಿ ಹೋರಾಡಿದ್ದಾರೆ, ಇಂದು ಅದನ್ನು ಉಳಿಸಿಕೊಳ್ಳಲು ಅನೇಕ ಮಂದಿ ಗಡಿಯಲ್ಲಿ ಹೋರಾಡುತ್ತಿದ್ದಾರೆ ಎಂದರು. ಸಾಮಾನ್ಯ ಜನರಾಗಿ ದೇಶಕಟ್ಟುವ ಹಾಗೂ ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವ ಕಾರ್ಯಕ್ಕೆ ಕೈ ಜೋಡಿಸ ಬೇಕಾಗಿದೆ ಎಂದರು.
ಸರಕಾರಿ ಶಿಕ್ಷಣ ಶಿಕ್ಷಕ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಕುಮಾರಸ್ವಾಮ ಎಚ್ ಪ್ರಧಾನ ಭಾಷಣ ಮಾಡಿ ತನ್ನ ಜೀವನವನ್ನು ತಾನಾಗಿ ಬದುಕಲು ಇರುವುದೇ ಸ್ವಾತಂತ್ರ್ಯ. ದೇಶ ಕಾಯುವುದು ಹೇಗೆ ದೇಶಭಕ್ತಿಯೋ ಅದೇ ರೀತಿ ಒಳ್ಳೆಯ ಕೆಲಸ ಮಾಡಿ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ವ್ಯಕ್ತಿಗಳು ಕೂಡ ದೇಶ ಪ್ರೇಮಿಗಳು ಎಂದರು. ಇನ್ನೊರ್ವನ ಸ್ವಾತಂತ್ರ್ಯವನ್ನು ಕಸಿದು ಕೊಳ್ಳುವ ಹಕ್ಕು ನಮಗಿಲ್ಲ. ಇನ್ನೊಬ್ಬನಿಗೆ ಏನನ್ನು ಬಿಟ್ಟುಕೊಡದೆ ಸ್ವಾತಂತ್ರ್ಯ ವನ್ನು ಪಡೆಯಲು ಸಾಧ್ಯವಿಲ್ಲ. ಬಿಟ್ಟು ಕೊಟ್ಟು ಬದುಕುವ ಸ್ವಾತಂತ್ರ ಅರ್ಥಪೂರ್ಣವಾದುದು ಎಂದರು. ವ್ಯಕ್ತಿಯ ಮನಸ್ಸಿನೊಳಗಿರುವ ಸರ್ವಾಧಿಕಾರಿಯನ್ನು ಹಿಮ್ಮೆಟ್ಟಿಸ ಬೇಕು. ಸಾತಂತ್ರ್ಯ ನಮೆಮಲ್ಲರ ಹಕ್ಕು ಮಾತ್ರವಲ್ಲ ಕರ್ತವ್ಯವಾಗ ಬೇಕು ಎಂದರು.
ಸರ್ವೊತ್ತಮ ಸೇವಾ ಪ್ರಶಸ್ತಿ ಪಡೆದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.
ಹಸಿರು ಕರ್ನಾಟಕ ಆಂದೋಲನಕ್ಕೆ ಚಾಲನೆ:
ಇದೇ ವೆಳೆ ಬಂಟ್ವಾಳ ಅರಣ್ಯ ಇಲಾಖೆ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ಹಸಿರು ಕರ್ನಾಟಕ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಅರಣ್ಯ ವಲಯಾಧಿಕಾರಿ ಬಿ.ಸುರೇಶ್ ಕಾರ್ಯಕ್ರಮದ ಕುರಿತು ತಿಳಿಸಿದರು. ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಗಿಡಗಳನನ್ನು ವಿತರಿಸಲಾಯಿತು.
ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ವಲಯ ಅರಣ್ಯಧಿಕಾರಿ ಸುರೇಶ್, ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪ ಪ್ರಭು, ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸುಧಾ ಜೋಷಿ, ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ವಿಷಯ ನಿರ್ವಾಹಕ ವಿಶುಕುಮಾರ್ ಮತ್ತಿತರರು ಹಾಜರಿದ್ದರು. ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿದರು. ಇಒ ರಾಜಣ್ಣ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.