ನೇತ್ರಾವತಿ ನದಿಯಲ್ಲಿ ಭಾರಿ ಪ್ರವಾಹದಿಂದ ಬಿ.ಸಿ.ರೋಡ್ ತಲಪಾಡಿಯ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ನ ಹಿಂದೆ ಇರುವ ಎರಡು ವಿದ್ಯುತ್ ಗೋಪುರ, 8 ಕಂಬಗಳು ಕುಸಿದಿದ್ದು 50 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಜೀಪಮುನ್ನೂರು, ಸಜೀಪಮೂಡ, ಸಜೀಪನಡು, ಚೇಳೂರು, ಅಮ್ಟೂರು, ಗೋಳ್ತಮಜಲು, ಬಾಳ್ತಿಲ, ಬೋಳಂತೂರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಗೋಪುರವು ನೇತ್ರಾವತಿ ನದಿಯಲ್ಲಿ ಪ್ರವಾಹ ಬಂದ ಕಾರಣ ಕುಸಿದಿದೆ. ಈ ಗ್ರಾಮಗಳಿಗೆ ಸುತ್ತುಬಳಸಿ ಪರ್ಯಾಯ ವಿದ್ಯುತ್ ಲೈನ್ ಮೂಲಕ ಸಂಪರ್ಕ ಕಲ್ಪಿಸಲಾಗಿದ್ದು ಹೊಸ ಗೋಪುರ ಅಳವಡಿಕೆವರೆಗೆ ಗ್ರಾಹಕರು ಸಹಕರಿಸಬೇಕು ಎಂದು ಎಇಇ ನಾರಾಯಣ ಭಟ್ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…