ಅಟಲ್ಜಿಯವರು ಪಕ್ಷವನ್ನು ಬೆಳೆಸುವುದರೊಂದಿಗೆ ರಾಮರಾಜ್ಯ ನಿರ್ಮಾಣದ ಕನಸನ್ನು ನಮ್ಮಲ್ಲಿ ಬಿತ್ತಿದರು. ಅವರ ಪ್ರೇರಣೆಯಿಂದಲೇ ಇಂದು ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ ರೋಡಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಶ್ರದ್ಧಾಂಜಲಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಅಟಲ್ಜೀ ಆಡಳಿತ ಕಾಲದಲ್ಲಿ ಭಾರತ ವಿಶ್ವ ಮಾನ್ಯತೆ ಪಡೆದಿತ್ತು. ಪೋಖ್ರಾನ್ ಅಣು ಪರಿಕ್ಷೆಯ ಮೂಲಕ ಭಾರತದ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿದ್ದರು, ಗ್ರಾಮಗಳ ಅಭಿವೃದ್ಧಿU ಒತ್ತು ನೀಡಿದ್ದ ಅವರು, ಕರಾವಳಿಯ ಅವಿನಾಭಾವ ಸಂಬಂಧ ಹೊಂದಿದ್ದರು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ದಿನೇಶ್ ಅಮ್ಟೂರು, ಜಿ.ಪಂ ಸದಸ್ಯರಾದ ರವಿಂದ್ರ ಕಂಬಳಿ, ರೊನಾಲ್ಡ್ ಡಿ.ಸೋಜ ಮತ್ತು ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…