ಬಂಟ್ವಾಳ

ರಾಮರಾಜ್ಯದ ಕನಸು ಬಿತ್ತಿದವರು ಅಟಲ್: ಶಾಸಕ ರಾಜೇಶ್ ನಾಯ್ಕ್

ಅಟಲ್ಜಿಯವರು ಪಕ್ಷವನ್ನು ಬೆಳೆಸುವುದರೊಂದಿಗೆ ರಾಮರಾಜ್ಯ ನಿರ್ಮಾಣದ ಕನಸನ್ನು ನಮ್ಮಲ್ಲಿ ಬಿತ್ತಿದರು. ಅವರ ಪ್ರೇರಣೆಯಿಂದಲೇ ಇಂದು ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ ರೋಡಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಶ್ರದ್ಧಾಂಜಲಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಜಾಹೀರಾತು

ಅಟಲ್ಜೀ ಆಡಳಿತ ಕಾಲದಲ್ಲಿ ಭಾರತ ವಿಶ್ವ ಮಾನ್ಯತೆ ಪಡೆದಿತ್ತು. ಪೋಖ್ರಾನ್ ಅಣು ಪರಿಕ್ಷೆಯ ಮೂಲಕ ಭಾರತದ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿದ್ದರು, ಗ್ರಾಮಗಳ ಅಭಿವೃದ್ಧಿಒತ್ತು ನೀಡಿದ್ದ ಅವರು, ಕರಾವಳಿಯ ಅವಿನಾಭಾವ ಸಂಬಂಧ ಹೊಂದಿದ್ದರು ಎಂದು ಸ್ಮರಿಸಿದರು.

ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ದಿನೇಶ್ ಅಮ್ಟೂರು, ಜಿ.ಪಂ ಸದಸ್ಯರಾದ ರವಿಂದ್ರ ಕಂಬಳಿ, ರೊನಾಲ್ಡ್ ಡಿ.ಸೋಜ ಮತ್ತು ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ