ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ವ್ಯಕ್ತಿತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಗುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಆರೆಸ್ಸೆಸ್ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಜಾಹೀರಾತು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನುಡಿನಮನ ಸಂಘ ಪರಿವಾರದ ವತಿಯಿಂದ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಡಾ. ಭಟ್, ವಾಜಪೇಯಿ ಅವರ ಪಕ್ಷನಿಷ್ಟೆ, ಪ್ರಾಮಾಣಿಕತೆ, ಹಿಂದುತ್ವ , ಉತ್ತಮ ವ್ಯಕ್ತಿತ್ವ, ತತ್ವಾದರ್ಶ, ದೈರ್ಯ, ಸಾಹಸ ಎಲ್ಲವೂ ಕಾರ್ಯಕರ್ತರಲ್ಲಿ ಜೀವಂತವಾಗಿ ಇರಬೇಕು ಇದುವೆ ನಾವು ಅವರಿಗೆ ನೀಡುವ ಶ್ರದ್ಧಾಂಜಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ. ಕಮಲಾ ಪ್ರಭಾಕರ ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಕಲ್ಲಡ್ಕ ಶ್ರೀ ರಾಮಮಂದಿರದಿಂದ ಕಲ್ಲಡ್ಕ ಪೇಟೆ ಯಲ್ಲಿ ಕಾಲ್ನಡಿಗೆ ಯ ಮೂಲಕ ಪೇಟೆಯ ಮೂಲಕ ಕರಿಂಗಾನ ಕ್ರಾಸ್ ವರೆಗೆ ಸಾಗಿ ಬಳಿಕ ಕಲ್ಲಡ್ಕ ಶ್ರೀ ರಾಮ ಮಂದಿರಕ್ಕೆ ವಾಜಪೇಯಿ ಭಾವಚಿತ್ರವನ್ನು ಮುಂದಿಟ್ಟು ಕಾಲ್ನಡಿಗೆ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಾಜಪೇಯಿ ವ್ಯಕ್ತಿತ್ವ ಅಳವಡಿಸಿಕೊಂಡು ಸಾಗುವುದೇ ಅವರಿಗೆ ಸಲ್ಲಿಸುವ ಗೌರವ: ಡಾ. ಭಟ್"
Be the first to comment on "ವಾಜಪೇಯಿ ವ್ಯಕ್ತಿತ್ವ ಅಳವಡಿಸಿಕೊಂಡು ಸಾಗುವುದೇ ಅವರಿಗೆ ಸಲ್ಲಿಸುವ ಗೌರವ: ಡಾ. ಭಟ್"