ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದಲ್ಲಿ ಸೆ. 3 ರಂದು ನಡೆಯಲಿರುವ ರಾಷ್ಟ್ರೀಯ ಧರ್ಮ ಸಂಸದ್ 2018 ಇದರ ಆಮಂತ್ರಣ ಪತ್ರವನ್ನು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿಯವರಿಗೆ ನೀಡಲಾಯಿತು. ಈ ಸಂದರ್ಭ ಜಿಲ್ಲಾ ಸಮಿತಿ ಸಂಚಾಲಕ ಕೃಷ್ಣಪ್ಪ ಪೂಜಾರಿ ಪ್ರಮುಖರಾದ ಬೇಬಿ ಕುಂದರ್, ವಿಶ್ವನಾಥ ಬಿ., ಪ್ರಸಾದ್ ನರಿಕೊಂಬು ಹಾಜರಿದ್ದರು.