ಬಂಟ್ವಾಳ

ಸಾಗುವಾನಿ ಮರ ಅಕ್ರಮ ಸಾಗಾಟ ಪತ್ತೆ

ಸಾಗುವಾನಿ ಮರಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಅಗರಂಗಡಿ ಎಂಬಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಗರಂಗಡಿ ಎಂಬಲ್ಲಿ ಸಾರ್ವಜನಿಕ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಅರಣ್ಯ ಇಲಾಖೆ ಯ ಅಧಿಕಾರಿಗಳು 12 ಲಕ್ಷ ರೂ ಮೌಲ್ಯದ ಲಾರಿ ಸಹಿತ  ಸಾಗುವಾನಿ ಮರಗಳನ್ನು ವಶಕ್ಕೆ ಪಡೆದುಕೊಂಡರು. ಈ ಸಂದರ್ಭ ಆರೋಪಿ ಲಾರಿ ಚಾಲಕ ಪೈಜಲ್ ಎಂಬಾತನನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಗೊಳಿಸಲಾಗಿದೆ. ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಅವರ ಮಾರ್ಗದರ್ಶನ ದಲ್ಲಿ ಉಪವಲಯ ಅರಣ್ಯಾಧಿಕಾರಿ ಅನಿಲ್ ಕೆ, ಮನೋಜ್, ಲಕ್ಮೀನಾರಾಯಣ , ಸ್ಮಿತಾ, ಚಾಲಕ ಜಯರಾಮ್  ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

6 hours ago