ತ್ಯಾಗ ಹಾಗೂ ಬಲಿದಾನ (ಬೆಲಿಯೆ ಪೆರುನ್ನಾಲ್) ಸಂಕೇತವಾಗಿ ಬಕ್ರೀದ್ ಹಬ್ಬವನ್ನು ಬಂಟ್ವಾಳ ತಾಲೂಕಿನಾದ್ಯಂತ ಸರಳವಾಗಿ ಆಚರಿಸಲಾಯಿತು.
ಕೇರಳ ರಾಜ್ಯ ಹಾಗೂ ಕೊಡಗು ಜಿಲ್ಲೆಯಲ್ಲಿ ಜಲಪ್ರಳಯದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಖಾಝಿಯವರ ಕರೆಯ ಮೇರೆಗೆ ಸರಳ ರೀತಿಯಲ್ಲಿ ಹಬ್ಬ ಆಚರಣೆಗೆ ಮುಸ್ಲಿಂ ಬಾಂಧವರು ಮುಂದಾಗಿದ್ದಾರೆ. ತಾಲೂಕಿನ ಎಲ್ಲ ಮಸೀದಿಗಳಲ್ಲೂ ವಿಶೇಷ ನಮಾಝ್, ಖುತುಬಾ ಹಾಗೂ ದುವಾಃ ದೊಂದಿಗೆ ಮುಸ್ಲಿಂ ಬಾಂಧವರು ಬಕ್ರೀದ್ ಆಚರಣೆಯಲ್ಲಿ ತೊಡಗಿಕೊಂಡರು. ವಿವಿಧೆಡೆ ವಿವಿಧ ಸಂಘ ಸಂಸ್ಥೆಗಳಿಂದ ನೆರೆ ಸಂತ್ರಸ್ತರಿಗಾಗಿ ಸಹಾಯಧನವನ್ನು ಸಂಗ್ರಹಿಸಲಾಯಿತು.