ಬಂಟ್ವಾಳ

ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ತಂಡವು ವಿನ್ನರ್‍ಸ್ ಆಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ತಾಲೂಕು ಮಟ್ಟದ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ಬಂಟ್ವಾಳದ ಎಸ್.ವಿ.ಎಸ್. ಪ.ಪೂ.ಕಾಲೇಜಿನಲ್ಲಿ ನಡೆಯಿತು.

ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿ ವಿಜೇತರಿಗೆ  ಬಹುಮಾನ ವಿತರಣೆ ಮಾಡಿದರು.

ಹುಡುಗಿಯರ ವಿಭಾಗದಲ್ಲಿ ಮೊಡಂಕಾಪು ಕಾರ್ಮೆಲ್ ಪ. ಪೂ. ಕಾಲೇಜು ಮತ್ತು  ಹುಡುಗರ ವಿಭಾಗದಲ್ಲಿ ಅಳಿಕೆ ಸತ್ಯಸಾಯಿ ಲೋಕಸೇವಾ ಪ. ಪೂ. ಕಾಲೇಜು ತಂಡ ರನ್ನರ್‍ಸ್ ಆಫ್ ಸ್ಥಾನ ಪಡೆಯಿತು. ಮೊಡಂಕಾಪು ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸುರೇಶ್ ನಂದೊಟ್ಟು, ಅಳಿಕೆ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಮತ್ತು ಬಂಟ್ವಾಳ ಎಸ್.ವಿ.ಎಸ್ ಕಾಲೇಜು ಅರ್ಥಶಾಸ್ತ್ರ ಉಪನ್ಯಾಸಕ ಹಾಗೂ ಕ್ರೀಡಾ ಸಲಹೆಗಾರ ಪ್ರದೀಪ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಎಸ್.ವಿ.ಎಸ್ ಕಾಲೇಜು  ದೈಹಿಕ ಶಿಕ್ಷಣ ನಿರ್ದೇಶಕ ಲೆಪ್ಟಿನೆಂಟ್ ಸುಂದರ್ ಸ್ವಾಗತಿಸಿ, ವಂದಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ