ಕಲ್ಲಡ್ಕ

ಮಾಣಿಯಲ್ಲಿ ವೈಭವದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ

ಮಾಣಿ ಯುವಕ ಮಾಂಡಲ ಮಾಣಿ ವತಿಯಿಂದ ಮಾಣಿ ಗ್ರಾಮದ ಗಾಂಧಿ ಮೈದಾನದಲ್ಲಿ ಸೆ.2ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿಜೃಂಭಣೆಯ ಮೊಸರು ಕುಡಿಕೆ ಉತ್ಸವವು ಜರುಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಣಿ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಾಣಿಗುತ್ತು ಸಚಿನ್ ರೈ ನೆರವೇರಿಸಲಿದ್ದಾರೆ ತದನಂತರ ಸಂಜೆಯವರೆಗೆ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ ಜರುಗಲಿದ್ದು, ಸಂಜೆ ಮಾಜಿ ಸಚಿವರಾದ ರಮಾನಾಥ ರೈ ಅವರ ಮುಖ್ಯ ಅತಿಥ್ಯದಲ್ಲಿ ಸಭಾ ಕಾರ್ಯಕ್ರಮ ನಡೆಯುವುದು. ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು ಸ್ವರ್ಣಜ್ಯೋತ್ಸನ ಕಾಪಿಕಾಡು ಇವರು ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ. ಇದೇ ವೇಳೆ ಹಿರಿಯ ಕಬಡ್ಡಿ ಆಟಗಾರ ಕೃಷ್ಣಪ್ಪ ಕುಲಾಲ್ ಮತ್ತು ಗ್ರಾಪಂ ಮಾಜಿ ಅಧ್ಯಕ್ಷೆ ವನಿತಾ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಣಿ ಯುವಕ ಮಂಡಲ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ ಸಾಗು, ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಜಗದೀಶ ಜೈನ್ ಮತ್ತು ಸದಸ್ಯರು, ಪದಾಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ