ಬಿ.ಸಿ.ರೋಡು ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ಮಟ್ಟದ ಬ್ರಹ್ಮಶ್ರೀ ಗುರು ನಾರಾಯಣ ಜಯಂತಿ ಕಾರ್ಯಕ್ರಮ ನಡೆಯಿತು.
ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ನಾರಾಯಣ ಗುರುಗಳು ಸಮಸ್ತ ಅಸ್ಪೃಶ್ಯ ವರ್ಗದವರನ್ನು ಮೇಲೆತ್ತುವ ಪ್ರಯತ್ನದಲ್ಲಿ ಮಹತ್ಸಾಧನೆಯನ್ನು ಮಾಡಿದ್ದಾರೆ. ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟರು, ಒಂದೇ ಜಾತಿ ಒಂದೆ ಮತ ಹಾಗೂ ಒಂದೇ ದೇವರು ಇದು ಅವರ ತತ್ವವಾಗಿತ್ತು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವ ಪ್ರಕಾಶ್. ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ರಾಜಣ್ಣ ಉಪ ತಹಶೀಲ್ದಾರ್ ಗಳಾದ ವಾಸು ಶೆಟ್ಟಿ, ರಾಜೇಶ್ ನಾಯ್ಕ್ ಪ್ರಭಾರ ಉಪತಹಶೀಲ್ದಾರ್ ಗ್ರೆಟ್ಟಾ ಮಸ್ಕರೇಞಸ್, ಸೀತಾರಾಮ, ತಾಲೂಕು ಕಚೇರಿ ಸಿಬಂದಿ ವರ್ಗ, ಗ್ರಾಮ ಕರಣಿಕರು ಗ್ರಾಮ ಸಹಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು. ಕಂದಾಯ ಅಧಿಕಾರಿ ನವೀನ್ ಬೆಂಜನ ಪದವು ನಿರೂಪಿಸಿದರು. ಆರ್.ಐ. ರಾಮ ಕಾಟಿ ಪಳ್ಳ ಸ್ವಾಗತಿಸಿ ವಂದಿಸಿದರು.
Be the first to comment on "ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ"