ಮಹಾ ಮಾನವತವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆಯನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸಬೇಕು ಎಂದು ಎರಡು ವರ್ಷಗಳ ಹಿಂದೆ ಸರಕಾರ ಆದೇಶಿಸಿದ್ದರೂ ಬಂಟ್ವಾಳ ತಾಲೂಕಾಡಳಿತ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದಮಾಜಿ ಸಚಿವ ಬಿ.ರಮಾನಾಥ ರೈ, ಇದು ದಿನಾಂಕ ನಿಗದಿಪಡಿಸಿ ಆಚರಿಸುವ ಕಾರ್ಯಕ್ರಮವಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಡ ತಂದ ಕಾರಣ ರಾಜ್ಯಾದ್ಯಂತ ಬ್ರಹ್ಮಶ್ರೀ ನಾರಾಯಣ ಗುರುಗಳ ದಿನಾಚರಣೆಯನ್ನು ಬಂಟ್ವಾಳ ತಾಲೂಕಿನ ಸಜೀಪಮೂಡದಲ್ಲೇ ಘೋಷಣೆ ಮಾಡಿದ್ದರು. ಆದರೆ ಬಂಟ್ವಾಳದಲ್ಲೇ ಜಯಂತಿ ಆಚರಿಸಿಲ್ಲ. ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದು ಸಮುದಾಯಕ್ಕೆ ಸೀಮಿತರಾದ ವ್ಯಕ್ತಿತ್ವವಲ್ಲ ಎಂದರು.
ಜಾಹೀರಾತು
ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್. ಪದ್ಮಶೇಖರ ಜೈನ್, ಮಮತಾಗಟ್ಟಿ, ಮಂಜುಳಾ ಮಾವೆ, ಬೇಬಿ ಕುಂದರ್, ಮಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ ಮತ್ತಿತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ: ಕಾಂಗ್ರೆಸ್ ಆರೋಪ"
Be the first to comment on "ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ: ಕಾಂಗ್ರೆಸ್ ಆರೋಪ"