ಅಗೋಸ್ಟ್ 31ರ ಬಂಟ್ವಾಳ ಪುರಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಸಮರ್ಥ ಅಭ್ಯರ್ಥಿಗಳಿಗೆ ಮತವನ್ನು ನೀಡಿ ಆಶೀರ್ವದಿಸಬೇಕಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಿನಂತಿಸಿದ್ದಾರೆ.
ಜಾಹೀರಾತು
ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಫತೆ, ಸಮಗ್ರ ಒಳಚರಂಡಿ ವ್ಯವಸ್ಥೆ, ಭ್ರಷ್ಟಾಚಾರ ಮುಕ್ತ ಆಡಳಿತ, ಶುದ್ಧ ಕುಡಿಯುವ ನೀರಿನ ಪೂರೈಕೆ, ಪ್ಲ್ಲಾಸ್ಟಿಕ್ ಮುಕ್ತ ಪುರಸಭೆ, ಪುರಸಭಾ ವ್ಯಾಪ್ತಿಯಲ್ಲಿ ಮೂರು ತಿಂಗಳಿಗೊಮ್ಮೆ ವಾರ್ಡ್ ಸಭೆ, ಬಿ.ಸಿ.ರೋಡಿನ ನಗರ ಸುಂದರೀಕರಣಕ್ಕೆ ಆದ್ಯತೆ, ನಗರದ ಆಯ್ದ ಭಾಗಗಳಲ್ಲಿ ಖಾಸಗಿ ಹಾಗೂ ಸಾರಿಗೆ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಬಿ.ಸಿ.ರೋಡಿನ ನೂತನ ಕೆ.ಎಸ್.ಆರ್.ಟಿ.ಸಿ ಬಸ್ಸ್ ನಿಲ್ದಾಣದ ಎದುರು ವೃತ್ತವನ್ನು ನಿರ್ಮಿಸಿ ಎಲ್ಲಾ ಸರಕಾರಿ ಬಸ್ಸುಗಳು ನಿಲ್ದಾಣದೊಳಗೆ ಬರುವ ವ್ಯವಸ್ಥೆ, ಪುರಸಭೆಯ ವಿವಿಧ ಭಾಗಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಇವುಗಳ ಅನುಷ್ಠಾನದ ಜೊತೆ ಪುರಸಭೆಯ ಸರ್ವತೋಮುಖ ಅಭಿವೃದ್ಧಿ, ಜನಪರ, ಪಾರದರ್ಶಕ ಆಡಳಿತಕ್ಕಾಗಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸಬೇಕಾಗಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜನಪರ, ಪಾರದರ್ಶಕ ಆಡಳಿತಕ್ಕಾಗಿ ಬಿಜೆಪಿ ಗೆಲ್ಲಿಸಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್"
Be the first to comment on "ಜನಪರ, ಪಾರದರ್ಶಕ ಆಡಳಿತಕ್ಕಾಗಿ ಬಿಜೆಪಿ ಗೆಲ್ಲಿಸಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್"