ಅಗೋಸ್ಟ್ 31ರ ಬಂಟ್ವಾಳ ಪುರಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಸಮರ್ಥ ಅಭ್ಯರ್ಥಿಗಳಿಗೆ ಮತವನ್ನು ನೀಡಿ ಆಶೀರ್ವದಿಸಬೇಕಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಿನಂತಿಸಿದ್ದಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಫತೆ, ಸಮಗ್ರ ಒಳಚರಂಡಿ ವ್ಯವಸ್ಥೆ, ಭ್ರಷ್ಟಾಚಾರ ಮುಕ್ತ ಆಡಳಿತ, ಶುದ್ಧ ಕುಡಿಯುವ ನೀರಿನ ಪೂರೈಕೆ, ಪ್ಲ್ಲಾಸ್ಟಿಕ್ ಮುಕ್ತ ಪುರಸಭೆ, ಪುರಸಭಾ ವ್ಯಾಪ್ತಿಯಲ್ಲಿ ಮೂರು ತಿಂಗಳಿಗೊಮ್ಮೆ ವಾರ್ಡ್ ಸಭೆ, ಬಿ.ಸಿ.ರೋಡಿನ ನಗರ ಸುಂದರೀಕರಣಕ್ಕೆ ಆದ್ಯತೆ, ನಗರದ ಆಯ್ದ ಭಾಗಗಳಲ್ಲಿ ಖಾಸಗಿ ಹಾಗೂ ಸಾರಿಗೆ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಬಿ.ಸಿ.ರೋಡಿನ ನೂತನ ಕೆ.ಎಸ್.ಆರ್.ಟಿ.ಸಿ ಬಸ್ಸ್ ನಿಲ್ದಾಣದ ಎದುರು ವೃತ್ತವನ್ನು ನಿರ್ಮಿಸಿ ಎಲ್ಲಾ ಸರಕಾರಿ ಬಸ್ಸುಗಳು ನಿಲ್ದಾಣದೊಳಗೆ ಬರುವ ವ್ಯವಸ್ಥೆ, ಪುರಸಭೆಯ ವಿವಿಧ ಭಾಗಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಇವುಗಳ ಅನುಷ್ಠಾನದ ಜೊತೆ ಪುರಸಭೆಯ ಸರ್ವತೋಮುಖ ಅಭಿವೃದ್ಧಿ, ಜನಪರ, ಪಾರದರ್ಶಕ ಆಡಳಿತಕ್ಕಾಗಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸಬೇಕಾಗಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.