ಬಂಟ್ವಾಳ

ಎಕರೆಗೆ 7 ಲಕ್ಷ. ರೂಗಳಂತೆ ಪರಿಹಾರ: ರೈತಸಂಘ, ಹಸಿರು ಸೇನೆ ಒತ್ತಾಯ

ಅಡಕೆ ಬೆಳೆಗಾರರು ಕೊಳೆರೋಗದಿಂದ ಅಪಾರ ಪ್ರಮಾಣದಲ್ಲಿ ನಷ್ಟಕ್ಕೊಳಗಾಗಿದ್ದು, ಎಕರೆಗೆ 7 ಲಕ್ಷರೂ.ನಂತೆ ಬೆಳೆ ಪರಿಹಾರ ಒದಗಿಸುವಂತೆ ಸರಕಾರವನ್ನು ಒತ್ತಾಯಿಸಿ  ಸಾಮೂಹಿಕವಾಗಿ ಮನವಿ ಸಲ್ಲಿಸಲು ಬಂಟ್ವಾಳ ತಾಲೂಕು ರೈತಸಂಘ ಹಸಿರುಸೇನೆಯ ವಿಶೇಷ ಸಭೆಯಲ್ಲಿ ನಿರ್ಧರಿಸಲಾಯಿತು.

ಜಾಹೀರಾತು

ಬಿ.ಸಿ.ರೋಡಿನ ಬ್ರಾಹ್ಮಣ ಪರಿಷತ್ ಸಭಾಭವನದಲ್ಲಿ ಬಂಟ್ವಾಳ ತಾಲೂಕು ರೈತ ಸಂಘದ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು.

ಸೆ..4 ರಂದು ತಹಶೀಲ್ದಾರರು,  ಜಿಲ್ಲಾಧಿಕಾರಿ, ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ‌ ಎಂದು‌ ಸಂಘದ ಪ್ರಕಟಣೆ ತಿಳಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮನೋಹರ ಶೆಟ್ಟಿ, ಪದಾಧಿಕಾರಿಗಳಾದ ಮುರುವ ಮಹಾಬಲ ಭಟ್, ಎನ್.ಕೆ.ಇದ್ದಿನಬ್ಬ, ಬಿ.ಸುದೇಶ್ ಮಯ್ಯ, ಭಾಸ್ಕರ, ರೋನಾಲ್ಡ್ ಡಿಸೋಜ, ಅಬ್ದುಲ್ ರಹಿಮಾನ್, ಚಂದ್ರಶೇಖರ ಶೆಟ್ಟಿ ಮೊದಲಾದವರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago