ಬಂಟ್ವಾಳ ಪುರಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶುಕ್ರವಾರ ಬೆಳಗ್ಗೆ ಆರಂಭಗೊಂಡಿತು. 27 ವಾರ್ಡುಗಳ 32 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ. ಪಕ್ಷಗಳ ನಡುವೆ ಹಣಾಹಣಿ ಇದೆ. ಬಿಜೆಪಿ 27, ಕಾಂಗ್ರೆಸ್ 25, ಎಸ್.ಡಿ.ಪಿ.ಐ. 12, ಜೆಡಿಎಸ್ 5 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಸಿಪಿಐ 1 ಸ್ಥಾನದಲ್ಲಿ ಅಭ್ಯರ್ಥಿಯನ್ನು ಕಾಂಗ್ರೆಸ್ ಬೆಂಬಲದೊಂದಿಗೆ ನಿಲ್ಲಿಸಿದೆ.
ಬೆಳಗ್ಗಿನ ಅವಧಿಯಲ್ಲಿ ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ಕೆಲ ವಾರ್ಡ್ ಗಳ ಮತಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಸಿಬ್ಬಂದಿಗಳಾದ ಶಿವಾನಂದ ನಾಟೇಕರ್, ಸದಾಶಿವ ಕೈಕಂಬ, ಅಶೋಕ್ ಮತ್ತಿತರಿದ್ದರು.
ತಹಶೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಚುನಾವಣಾಧಿಕಾರಿಗಳ ತಂಡ ಮತದಾನ ಪ್ರಕ್ರಿಯೆ ಮೇಲೆ ನಿಗಾ ಇರಿಸಿದ್ದರೆ, ಎಎಸ್ಪಿ ಹೃಷಿಕೇಶ್ ಸೋನಾವಣೆ ನೇತೃತ್ವದಲ್ಲಿ ಬಂಟ್ವಾಳ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.
ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್
Be the first to comment on "ಪುರಸಭೆ ಚುನಾವಣೆ: ಮತದಾನ ಬಿರುಸಿನ ಆರಂಭ"