ಬಂಟ್ವಾಳ ಪುರಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶುಕ್ರವಾರ ಬೆಳಗ್ಗೆ ಆರಂಭಗೊಂಡಿತು. 27 ವಾರ್ಡುಗಳ 32 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ. ಪಕ್ಷಗಳ ನಡುವೆ ಹಣಾಹಣಿ ಇದೆ. ಬಿಜೆಪಿ 27, ಕಾಂಗ್ರೆಸ್ 25, ಎಸ್.ಡಿ.ಪಿ.ಐ. 12, ಜೆಡಿಎಸ್ 5 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಸಿಪಿಐ 1 ಸ್ಥಾನದಲ್ಲಿ ಅಭ್ಯರ್ಥಿಯನ್ನು ಕಾಂಗ್ರೆಸ್ ಬೆಂಬಲದೊಂದಿಗೆ ನಿಲ್ಲಿಸಿದೆ.
ಬೆಳಗ್ಗಿನ ಅವಧಿಯಲ್ಲಿ ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ಕೆಲ ವಾರ್ಡ್ ಗಳ ಮತಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಸಿಬ್ಬಂದಿಗಳಾದ ಶಿವಾನಂದ ನಾಟೇಕರ್, ಸದಾಶಿವ ಕೈಕಂಬ, ಅಶೋಕ್ ಮತ್ತಿತರಿದ್ದರು.
ತಹಶೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಚುನಾವಣಾಧಿಕಾರಿಗಳ ತಂಡ ಮತದಾನ ಪ್ರಕ್ರಿಯೆ ಮೇಲೆ ನಿಗಾ ಇರಿಸಿದ್ದರೆ, ಎಎಸ್ಪಿ ಹೃಷಿಕೇಶ್ ಸೋನಾವಣೆ ನೇತೃತ್ವದಲ್ಲಿ ಬಂಟ್ವಾಳ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.