ಬಂಟ್ವಾಳ

ವಿಜಯೋತ್ಸವಕ್ಕೆ ನಿಷೇಧಾಜ್ಞೆ

ದ.ಕ. ಜಿಲ್ಲೆಯ ಉಳ್ಳಾಲ ನಗರಸಭೆ, ಬಂಟ್ವಾಳ ಪುರಸಭೆ ಮತ್ತು ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸೆ.3ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ನಿರ್ಬಂಧಕಾಜ್ಞೆ ವಿಧಿಸಿ ಆದೇಶಿಸಲಾಗಿದೆ.

ಈ ಅವಧಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು, ಪ್ರತಿಭಟನೆ, ಜಾಥಾ-ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಿದೆ.

ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ಯಾವುದೇ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಎಸೆಯುವ ಅಥವಾ ಇತರ ಉಪಕರಣಗಳ ಒಯ್ಯುವಿಕೆಯನ್ನು, ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿದೆ. ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕ್ರತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ.

ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೊಷಣೆಗಳನ್ನು ಮಾಡುವುದು, ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದಶಿಸುವುದು ಅಥವಾ ಪ್ರಸಾರ ಮಾಡುವುದನ್ನೂ ನಿಷೇಧಿಸಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ