ಬಂಟ್ವಾಳ

8 ಗಂಟೆಗೆ ಆರಂಭ, 11.30ಕ್ಕೆ ಪ್ರಮಾಣಪತ್ರ

www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ ಪುರಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಅತ್ಯಂತ ಕರಾರುವಾಕ್ಕಾಗಿ ನಿಗದಿತ ಸಮಯ 8 ಗಂಟೆಗೆ ಆರಂಭಗೊಂಡಿತು. ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ಮತ್ತು ತಹಶೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ನಡೆದ ಈ ಪ್ರಕ್ರಿಯೆಯಲ್ಲಿ ಬಂಟ್ವಾಳ  ಚುನಾವಣಾಧಿಕಾರಿಗಳಾದ ರಾಜೇಶ್,ಕೆ ಮೋಹನ್ ಕುಮಾರ್, ನೋಣಯ್ಯ ನಾಯ್ಕ್ , ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಭಾರ ಚುನಾವಣಾ ಉಪತಹಶೀಲ್ದಾರ್ ಸೀತಾರಾಮ, ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್, ದ್ವಿತೀಯ ದರ್ಜೆ ಸಹಾಯಕ ವಿನಯ ನಾಗರಾಜ್ , ವಿಷುಕುಮಾರ್, ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ,ದಿವಾಕರ ಮುಗುಳಿಯ, ನವೀನ್ ಬೆಂಜನ ಪದವು, ಸಿಬ್ಬಂದಿಗಳಾದ ಸದಾಶಿವ ಕೈಕಂಬ, ಲೀಲಾವತಿ, ಕಿರಣ್, ತೊಮಸ್, ಶೀತಲ್, ಚಂದು ಸಹಿತ ಹಲವರು ಸಹಕರಿಸಿದರು. ಸುಮಾರು 10 ಗಂಟೆಯ ಹೊತ್ತಿಗೆ ಎಲ್ಲ ಕ್ಷೇತ್ರಗಳ ಫಲಿತಾಂಶಗಳು ದೊರಕಿದರೆ, 11.30ರ ವೇಳೆಗಾಗಲೇ ಎಲ್ಲರಿಗೂ ಪ್ರಮಾಣಪತ್ರ ವಿತರಿಸಿ ಆಗಿತ್ತು.

ಜಾಹೀರಾತು

ಒಳಗೆ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದರೆ, ಹೊರಗೆ ನಿಷೇಧಾಜ್ಞೆ ಇದ್ದರೂ ವಿಜಯೋತ್ಸವ ಸಾಂಗವಾಗಿ ನಡೆಯಿತು. ಆದರೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಎಸ್ಪಿ ಋಷಿಕೇಶ್ ಸೋನಾವಣೆ ನಿರ್ದೇಶನದಲ್ಲಿ ಸಿಐ ನಾಗರಾಜ್, ಎಸ್ಸೈಗಳಾದ ಚಂದ್ರಶೇಖರ್, ಹರೀಶ್, ಪ್ರಸನ್ನ ಮತ್ತು ಸಿಬ್ಬಂದಿ ಬಂದೋಬಸ್ತ್ ಕೈಗೊಂಡರು.

ಆಗಾಗ್ಗೆ ಶಾಂತಿ ಕದಡುವ ಕುಖ್ಯಾತಿ ಪಡೆದಿದ್ದ ಬಂಟ್ವಾಳದಲ್ಲಿ ಇಡೀ ದಿನದ ಪ್ರಕ್ರಿಯೆ ಶಾಂತಿಯುತವಾಗಿ ನಡೆದದ್ದು ವಿಶೇಷ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ