ಬಂಟ್ವಾಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂ.ಕಾಂ. ತರಗತಿ ಉದ್ಘಾಟನೆ

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ವಿಭಾಗದಲ್ಲಿ ಎಂ.ಕಾಂ ತರಗತಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಯುವಜನತೆ ಉನ್ನತ ಶಿಕ್ಷಣದ ಅವಕಾಶಗಳನ್ನು ಬಳಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು ಎಂದು ಹೇಳಿದರು.

ಮುಖ್ಯವಾಗಿ ಗ್ರಾಮೀಣ ಪ್ರದೇಶದ ಹುಡುಗಿಯರಿಗೆ ಈಗ ಅವಕಾಶಗಳ ಬಾಗಿಲು ತೆರೆಯುತ್ತಿದೆ. ಉನ್ನತ ಶಿಕ್ಷಣದಿಂದಾಗಿ ಗಂಡು ಮಕ್ಕಳಿಗೆ ಸರಿಮಿಗಿಲಾಗಿ ಎಲ್ಲಾ ಉದ್ಯೋಗಗಳಲ್ಲೂ ಹೆಣ್ಣುಮಕ್ಕಳು ತೊಡಗಿಸಿಕೊಳ್ಳುವ ಕಾಲ ಬಂದಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಅಜಕ್ಕಳ, ಸರಕಾರಿ ಕಾಲೇಜುಗಳಲ್ಲಿ ಅತಿ ಕಡಿಮೆ ಶುಲ್ಕದಲ್ಲಿ ಸ್ನಾತಕೋತ್ತರ ಶಿಕ್ಷಣ ಲಭ್ಯ ಎಂದರು.

ಜಾಹೀರಾತು

ಕಾಲೇಜು ಬೆಳೆದು ಬಂದ ಹಾದಿ ನೆನಪಿಸಿಕೊಂಡ ಅವರು, ಮಧ್ಯಾಹ್ನದ ಊಟದ ವ್ಯವಸ್ಥೆ ಮೊದಲಾದ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು.  ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಮಚಂದ್ರ ಸುವರ್ಣ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೀರ್ತಿರಾಜ್ ವೇದಿಕೆಯಲ್ಲಿದ್ದರು. ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಪ್ರೊ. ಹೈದರಾಲಿ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ. ಶಶಿಕಲಾ ಕೆ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂ.ಕಾಂ. ತರಗತಿ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*